ಸಮಗ್ರ ಕೃಷಿ ಅಭಿಯಾನ ಸಮಾರೋಪ

ಶುಕ್ರವಾರ, ಜೂನ್ 21, 2019
24 °C

ಸಮಗ್ರ ಕೃಷಿ ಅಭಿಯಾನ ಸಮಾರೋಪ

Published:
Updated:
Prajavani

ದಾಬಸ್ ಪೇಟೆ: ’ಮಳೆಯಾಶ್ರಿತ ಕೃಷಿಯಲ್ಲಿ ತೊಡಗಿರುವ ರೈತರು ಕಾಲಕ್ಕೆ ಅನುಗುಣವಾಗಿ ಹಾಗೂ ಭೂಮಿಯ ಫಲವತ್ತತೆಯನ್ನು ನೋಡಿಕೊಂಡು ಬೇಸಾಯ ಮಾಡುವುದರಿಂದ ಉತ್ತಮ ಇಳುವರಿ ಪಡೆಯಲು ಸಾಧ್ಯ. ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಎಸ್.ಡಿ.ನೆಹರು ಹೇಳಿದರು.

ತ್ಯಾಮಗೊಂಡ್ಲು ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನಡೆದ ‘ಸಮಗ್ರ ಕೃಷಿ ಅಭಿಯಾನ ಯೋಜನೆ’ಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಭೂಮಿ ಫಲವತ್ತಾಗದೆ ಹೋದರೆ, ಎಷ್ಟೇ ಹೈಬ್ರಿಡ್ ತಳಿಗಳನ್ನು ಪರಿಚಯಿಸಿದರೂ ಹೆಚ್ಚು ಇಳುವರಿ ಬರುವುದಿಲ್ಲ. ರೈತರು ಏಕ ಮುಖ ಬೆಳೆಗಳನ್ನು ಬೆಳೆಯುವುದಕ್ಕಿಂತ ಮಣ್ಣಿನಲ್ಲಿ ಬೆರೆತು, ಕೊಳೆಯುವ ಫಲವತ್ತತೆಯನ್ನು ಹೆಚ್ಚಿಸುವ ಅಲಸಂದೆ, ಹುರುಳಿಯಂತಹ ಬೆಳೆ ಬೆಳೆದು ಭೂಮಿಗೆ ಸೇರಿಸಬೇಕು. ಭೂಮಿಯ ಆರೋಗ್ಯ ಹಾಗೂ ಫಲವತ್ತತೆ ಮುಂದಿನ ಪೀಳಿಗೆಗೂ ಮುಖ್ಯ. ಆದ್ದರಿಂದ ರೈತರು ಈ ಪದ್ದತಿ ಅಳವಡಿಸಿಕೊಳ್ಳಬೇಕು ಎಂದರು.

ಕೃಷಿ, ತೋಟಗಾರಿಕೆ, ಮೀನುಗಾರಿಕೆ, ರೇಷ್ಮೆ, ಅರಣ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ಸೌಲಭ್ಯಗಳ ಕುರಿತು ರೈತರಿಗೆ ಮಾಹಿತಿ ನೀಡಿದವು. ಕೃಷಿ ಯಂತ್ರಗಳ ವಸ್ತುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.

ಸಹಾಯಕ ಕೃಷಿ ನಿರ್ದೇಶಕಿ, ಸುಶೀಲಮ್ಮ, ‘ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬೇಕಾದ ಎಲ್ಲ ರೀತಿಯ ಬೀಜ, ಗೊಬ್ಬರ, ಔಷಧಗಳು ಸಿಗಲಿವೆ. ಕೃಷಿ ಯಂತ್ರಧಾರೆ ಯೋಜನೆಯಡಿ ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡಲಾಗುತ್ತದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !