95 ಸಾವಿರ ವಿದ್ಯಾರ್ಥಿಗಳಿಗೆ ಮಾನ್ಯತೆಗೆ ಪ್ರಯತ್ನ

ಮಂಗಳವಾರ, ಜೂನ್ 18, 2019
31 °C
ಕೆಎಸ್‌ಒಯು: ಯುಜಿಸಿಗೆ ಸಂಸದರ ನೇತೃತ್ವದಲ್ಲಿ ಮುಂದಿನ ವಾರ ನಿಯೋಗ

95 ಸಾವಿರ ವಿದ್ಯಾರ್ಥಿಗಳಿಗೆ ಮಾನ್ಯತೆಗೆ ಪ್ರಯತ್ನ

Published:
Updated:
Prajavani

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಲ್ಲಿ 2013–14 ಹಾಗೂ 2014–15ನೇ ಸಾಲಿನಲ್ಲಿ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಆಂತರಿಕ ಮಾನ್ಯತೆ ದೊರಕಿಸಿಕೊಡುವ ಗಂಭೀರ ಪ್ರಯತ್ನ ಶುರುವಾಗಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿ ಮೀರಿ ಹೊರರಾಜ್ಯದಲ್ಲಿ ಅಧ್ಯಯನ ಕೇಂದ್ರಗಳನ್ನು ತೆರೆದಿದ್ದು, ಅನುಮತಿಯಿಲ್ಲದೇ ಇದ್ದರೂ ತಾಂತ್ರಿಕ ಕೋರ್ಸ್‌ಗಳನ್ನು ಆರಂಭಿಸಿದ್ದು ಸೇರಿದಂತೆ ಹಲವು ಕಾನೂನುಗಳ ಉಲ್ಲಂಘನೆಯಾಗಿದ್ದ ಕಾರಣದಿಂದ ವಿ.ವಿ.ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾನ್ಯತೆ ರದ್ದುಪಡಿಸಿತ್ತು. ಆದರೆ, ಈ ಸಾಲುಗಳಲ್ಲಿ ತಾಂತ್ರಿಕೇತರ ಕೋರ್ಸ್‌ಗಳಿಗೆ ದಾಖಲಾಗಿದ್ದ ರಾಜ್ಯದೊಳಗಿನ 95 ಸಾವಿರ ವಿದ್ಯಾರ್ಥಿಗಳ ಪದವಿಗೂ ಮಾನ್ಯತೆ ಇಲ್ಲದಂತಾಗಿತ್ತು.

ಇದರಿಂದಾಗಿ, ಈ ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು, ಉನ್ನತ ಶಿಕ್ಷಣವನ್ನು ಮುಂದುವರೆಸಲು ಅಡಚಣೆಯಾಗಿತ್ತು. ಈ ವಿದ್ಯಾರ್ಥಿಗಳಲ್ಲಿ ಹಲವರು ಅಂಕಪಟ್ಟಿಗಳನ್ನು ಹಾಜರುಪಡಿಸಿ ಉದ್ಯೋಗವನ್ನೂ ಪಡೆದುಕೊಂಡಿದ್ದಾರೆ. ಆದರೆ, ಮಾನ್ಯತೆ ರದ್ದಾಗಿರುವ ಕಾರಣ, ಅವರ ಉದ್ಯೋಗಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ‘ಕೆಎಸ್‌ಒಯು’ ಹೈಕೋರ್ಟ್‌ನಲ್ಲಿ 2017ರ ಅ.15ರಂದು ಪ್ರಕರಣ ದಾಖಲಿಸಿತ್ತು. ಈ ವಿದ್ಯಾರ್ಥಿಗಳಿಗೆ ರಾಜ್ಯದೊಳಗೆ ಮಾನ್ಯತೆ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆದರೂ, ಈವರೆಗೂ ‘ಯುಜಿಸಿ’ ಮಾನ್ಯತೆ ನೀಡಿಲ್ಲ.‌

ನವದೆಹಲಿಗೆ ನಿಯೋಗ: ‘ಕುಲಪತಿ ಪ್ರೊ.ಎಸ್‌.ವಿದ್ಯಾಶಂಕರ್‌ ಅವರನ್ನು ಒಳಗೊಂಡಂತೆ ರಾಜ್ಯದ 10 ಸಂಸದರನ್ನು ಒಳಗೊಂಡ ನಿಯೋಗ ಮುಂದಿನ ವಾರ ನವದೆಹಲಿಯ ‘ಯುಜಿಸಿ’ಗೆ ಭೇಟಿ ನೀಡಲಿದೆ. ವಿಶ್ವವಿದ್ಯಾಲಯದಿಂದ ನಿಯಮ ಉಲ್ಲಂಘನೆಯಾಗಿದ್ದಕ್ಕೆ ವಿದ್ಯಾರ್ಥಿಗಳಿಗೆ ಬರೆ ಹಾಕುವುದು ಬೇಡ. ಅವರಿಗೆ ಈಗಾಗಲೇ ಅಂಕಪಟ್ಟಿ ನೀಡಲಾಗಿದೆ. ಮಾನ್ಯತೆ ನೀಡಿದಲ್ಲಿ, ಪ್ರಮಾಣಪತ್ರ ವಿತರಿಸಲಾಗುವುದು ಎಂದು ಮನವಿ ಮಾಡಿಕೊಳ್ಳಲಿದ್ದೇವೆ‘ ಎಂದು ಸಂಸದ ಪ್ರತಾಪ ಸಿಂಹ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿದ್ಯಾರ್ಥಿಗಳು ವಿ.ವಿ.ಗೆ ನಿರಂತರ ಮನವಿ ಸಲ್ಲಿಸಿದ್ದಾರೆ. ತಾಂತ್ರಿಕೇತರ ಕೋರ್ಸ್‌ಗಳಲ್ಲಿ ಯಾವುದೇ ರೀತಿಯ ಲೋಪವಾಗಿಲ್ಲ. ಅಲ್ಲದೇ, ರಾಜ್ಯದೊಳಗಿನ ವಿದ್ಯಾರ್ಥಿಗಳ ತಪ್ಪು ಇಲ್ಲಿಲ್ಲ. ಹಾಗಾಗಿ, ಅವರ ಕ್ಷೇಮ ಕಾಪಾಡುವುದು ನಮ್ಮ ಆದ್ಯತೆಯಾಗಿದೆ’ ಎಂದು ಕುಲಪತಿ ಪ್ರೊ.ವಿದ್ಯಾಶಂಕರ್‌ ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !