ಕೆರೆಯಲ್ಲಿ ಮೃತದೇಹ ಪತ್ತೆ: ಕೊಲೆ ಶಂಕೆ

ಬುಧವಾರ, ಜೂನ್ 26, 2019
23 °C

ಕೆರೆಯಲ್ಲಿ ಮೃತದೇಹ ಪತ್ತೆ: ಕೊಲೆ ಶಂಕೆ

Published:
Updated:

ಚನ್ನಪಟ್ಟಣ: ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟ ವ್ಯಕ್ತಿಯನ್ನು ಗ್ರಾಮದ ಜನತಾ ಕಾಲೊನಿಯ ಪೈರೋಜ್ ಎಂಬುವರ ಮಗ ಆಯೂಬ್ ಖಾನ್ (40) ಎಂದು ಗುರುತಿಸಲಾಗಿದೆ. ‘ನಮ್ಮ ಮಗನನ್ನು ಕೊಲೆ ಮಾಡಿ ಕೆರೆಗೆ ಎಸೆಯಲಾಗಿದೆ. ಮೃತ ಆಯೂಬ್ ಖಾನ್ ಗುಜರಿಯನ್ನು ನಡೆಸುತ್ತಿದ್ದು, ನಮ್ಮ ಮಗನ ಜೊತೆಯಲ್ಲಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಗಳೆ ಈ ಕೃತ್ಯ ಎಸಗಿದ್ದಾರೆ’ ಎಂದು ಮೃತನ ಪೋಷಕರು ಪಟ್ಟಣದ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !