ಹೆಚ್ಚಲಿದೆ ಸೌಂದರ್ಯ; ತಪ್ಪಲಿದೆ ಅಪಘಾತ

ಬುಧವಾರ, ಜೂನ್ 26, 2019
23 °C
ಬೆಸ್ಕಾಂ: ವಿದ್ಯುತ್‌ ತಂತಿಗಳ ಬದಲಿಗೆ ಭೂಗತ ಕೇಬಲ್‌ ಅಳವಡಿಕೆ ಕಾಮಗಾರಿ ಶೀಘ್ರ

ಹೆಚ್ಚಲಿದೆ ಸೌಂದರ್ಯ; ತಪ್ಪಲಿದೆ ಅಪಘಾತ

Published:
Updated:
Prajavani

ಬೆಂಗಳೂರು: ನಗರದಲ್ಲಿ ವಿದ್ಯುತ್‌ ಲೈನ್‌ಗಳನ್ನು ಭೂಗತ ಕೇಬಲ್‌ಗಳನ್ನಾಗಿ ಪರಿವರ್ತಿಸುವ ಕಾಮಗಾರಿಯನ್ನು 15 ದಿನಗಳಲ್ಲಿ ಬೆಸ್ಕಾಂ ಕೈಗೆತ್ತಿಕೊಳ್ಳಲಿದೆ.

ನಗರದ 63 ಉಪವಿಭಾಗಗಳ ಪೈಕಿ, 52ರಲ್ಲಿ ಭೂಗತ ಕೇಬಲ್‌ಗಳನ್ನು ಅಳವಡಿಸುವುದು ಬಾಕಿ ಇದೆ. ಸದ್ಯ, ಈಗ 29 ಉಪವಿಭಾಗಗಳಿಗೆ ಟೆಂಡರ್‌ ಕರೆದು ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಲೆಕ್ಕಪರಿಶೋಧನಾ ಕಾರ್ಯ ನಡೆಯುತ್ತಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂನ ಮುಖ್ಯ ಎಂಜಿನಿಯರ್‌ (ಯೋಜನೆ) ಬಿ.ಎನ್. ನಾಗರಾಜಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು. 

18 ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಷರತ್ತು ವಿಧಿಸಲಾಗಿದೆ. 23 ಉಪವಿಭಾಗಗಳ ಕಾಮಗಾರಿಯನ್ನು ಮುಂದಿನ 18 ತಿಂಗಳೊಳಗೆ ಕೈಗೆತ್ತಿಕೊಳ್ಳಲಾಗುವುದು. ಇದು ಒಟ್ಟು ಮೂರು ವರ್ಷ ಅವಧಿಯ ಯೋಜನೆ ಎಂದು ಅವರು ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !