₹28 ಲಕ್ಷ ನಷ್ಟ: ನಟ ಯಶ್ ತಾಯಿ ವಿರುದ್ಧ ಎಫ್‌ಐಆರ್

ಬುಧವಾರ, ಜೂನ್ 26, 2019
23 °C

₹28 ಲಕ್ಷ ನಷ್ಟ: ನಟ ಯಶ್ ತಾಯಿ ವಿರುದ್ಧ ಎಫ್‌ಐಆರ್

Published:
Updated:
Prajavani

ಬೆಂಗಳೂರು: ಬಾಡಿಗೆ ಮನೆಯನ್ನು ವಾಸಕ್ಕೆ ಯೋಗ್ಯವಲ್ಲದ ರೀತಿಯಲ್ಲಿ ನಾಶಪಡಿಸಿ ಮಾಲೀಕರಿಗೆ ನಷ್ಟ ಉಂಟು ಮಾಡಿದ ಆರೋಪದಡಿ ನಟ ಯಶ್ ಅವರ ತಾಯಿ ಪುಷ್ಪಾ ಹಾಗೂ ಇತರರ ವಿರುದ್ಧ ಗಿರಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.‌

ಬನಶಂಕರಿ ಮೂರನೇ ಹಂತದ ಮೂರನೇ ಬ್ಲಾಕ್‌ನ 5ನೇ ಕ್ರಾಸ್‌ನಲ್ಲಿ ವಾಸವಿದ್ದ ಬಾಡಿಗೆ ಮನೆಯನ್ನು ಪುಷ್ಪಾ ಅವರು ಇತ್ತೀಚೆಗಷ್ಟೇ ಖಾಲಿ ಮಾಡಿದ್ದರು. ‘ವಾಸಕ್ಕೆ ಯೋಗ್ಯವಲ್ಲದ ರೀತಿಯಲ್ಲಿ ಮನೆಯ ಕೆಲ ಭಾಗಗಳಿಗೆ ಧಕ್ಕೆ ಉಂಟು ಮಾಡಿ ಆಸ್ತಿಗೆ ನಷ್ಟವನ್ನುಂಟು ಮಾಡಿದ್ದಾರೆ’ ಎಂದು ಆರೋಪಿಸಿ ಮನೆಯ ಒಡತಿ ಡಾ. ವನಜಾ ಅವರು ಠಾಣೆಗೆ ದೂರು ನೀಡಿದ್ದರು.

ದೂರು ಆಧರಿಸಿ ಪೊಲೀಸರು, ಎನ್‌ಸಿಆರ್‌  (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ‘ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂದು ಪೊಲೀಸರಿಗೆ ಸೂಚನೆ ನೀಡಿತ್ತು. ಅದರನ್ವಯ ಸಾರ್ವಜನಿಕರ
ಆಸ್ತಿಗೆ ನಷ್ಟ ಉಂಟು ಮಾಡಿದ ಆರೋಪದಡಿ (ಐಪಿಸಿ 427) ಎಫ್‌ಐಆರ್ ದಾಖಲಾಗಿದೆ.

ದೂರಿನಲ್ಲಿ ಏನಿದೆ: ‘ನಮ್ಮ ಮನೆಯನ್ನು ಪುಷ್ಪಾ ಅವರಿಗೆ 2010ರಲ್ಲಿ ಬಾಡಿಗೆಗೆ ಕೊಡಲಾಗಿತ್ತು. ಸರಿಯಾಗಿ ಬಾಡಿಗೆ
ನೀಡದೇ ಇದ್ದುದರಿಂದ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಮನೆ ಖಾಲಿ ಮಾಡಿಸಲಾಗಿದೆ. ಮನೆ ಖಾಲಿ ಮಾಡುವಾಗ ಎಲೆಕ್ಟ್ರಿಕ್ ವಸ್ತುಗಳು, ಬಾಗಿಲುಗಳು, ಫ್ಯಾನ್‌ಗಳು, ಕಮೋಡ್ಸ್ ಸೇರಿ ಹಲವು ವಸ್ತುಗಳನ್ನು ಉದ್ದೇಶಪೂರ್ವಕವಾಗಿ ನಾಶಪಡಿಸಲಾಗಿದೆ. ಇದರಿಂದ ₹ 28 ಲಕ್ಷದಷ್ಟು ನಷ್ಟವಾಗಿದೆ’ ಎಂದು ವನಜಾ ದೂರಿನಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 23

  Happy
 • 4

  Amused
 • 1

  Sad
 • 2

  Frustrated
 • 4

  Angry

Comments:

0 comments

Write the first review for this !