ಮರಳು ಅಭಾವ ಬಗೆಹರಿಸಲು ಆಗ್ರಹ

ಮಂಗಳವಾರ, ಜೂನ್ 25, 2019
24 °C
ಪೆರಾಬೆ ಗ್ರಾಮ ಪಂಚಾಯಿತಿ ಸಭೆ

ಮರಳು ಅಭಾವ ಬಗೆಹರಿಸಲು ಆಗ್ರಹ

Published:
Updated:
Prajavani

ಕಡಬ (ಉಪ್ಪಿನಂಗಡಿ): ಮರಳು ಅಭಾವದಿಂದಾಗಿ ಸರ್ಕಾರ ಬಡವರಿಗೆ ನೀಡಿರುವ ವಸತಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಫಲಾನುಭವಿಗಳಿಗೆ ಸಮಸ್ಯೆ ಎದುರಾಗಿರುವುದರ ಜೊತೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕೆಲಸಗಳಿಗೂ ತೊಂದರೆ ಉಂಟಾಗಿದ್ದು, ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಗಣಿ ಇಲಾಖೆಗೆ ಪತ್ರ ಬರೆಯಲು ಪೆರಾಬೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಗುಣಾ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ನಿರ್ಣಯ ಅಂಗೀಕರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷ ಜನಾರ್ದನ ಶೆಟ್ಟಿ ವಿಷಯ ಪ್ರಸ್ತಾಪಿಸಿ, ‘ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮರಳು ದೊರೆಯುತ್ತಿಲ್ಲ. ಇದರಿಂದಾಗಿ ಗ್ರಾಮ ಪಂಚಾಯಿತಿಯ ವಿವಿಧ ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ವಸತಿ ‌ಯೋಜನೆಯ ಕಾಮಗಾರಿಗೆ ತೊಂದರೆಯಾಗಿದೆ. ವಸತಿ ಯೋಜನೆಯಡಿ ಮನೆ ನಿರ್ಮಾಣ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ಫಲಾನುಭವಿಗಳಿಗೆ ಆಗುತ್ತಿಲ್ಲ. ಇದಕ್ಕೆ ಶೀಘ್ರ ಪರಿಹಾರ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಗಣಿ ಇಲಾಖೆಗೆ ಪತ್ರ ಬರೆಯಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಇತರೆ ಸದಸ್ಯರು ಬೆಂಬಲ ಸೂಚಿಸಿದ್ದರಿಂದ ಪತ್ರ ಬರೆಯಲು ನಿರ್ಣಯ ಕೈಗೊಳ್ಳಲಾಯಿತು.

ನರೇಗಾ ಯೋಜನೆಯಡಿ ಪೆರಾಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮೆತ್ತಡ್ಕ ರಸ್ತೆ, ಮಾವಿನ ಕಟ್ಟೆ (ದೇವಿ ನಗರ) ರಸ್ತೆ, ಇಡಾಳ ಶಾಲಾ ರಸ್ತೆ ಮತ್ತು ಪೆರಾಬೆ ಮತ್ತು ಜನತಾ ಕಾಲೊನಿ ರಸ್ತೆಯನ್ನು ಈ ಆರ್ಥಿಕ ವರ್ಷದಲ್ಲಿ ಕಾಂಕ್ರೀಟೀಕರಣಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಮನೆ ತೆರಿಗೆ ಹಾಗೂ ನೀರಿನ ಶುಲ್ಕ ಪಾವತಿಸಲು ಬಾಕಿ ಇರುವ ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡುವುದು. ವ್ಯಾಪಾರ ಪರವಾನಗಿ ಪಡೆಯದೆ ವ್ಯಾಪಾರ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟಿಸ್‌ ಜಾರಿಗೊಳಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.

ಸದಸ್ಯರಾದ ಚಂದ್ರಶೇಖರ ರೈ, ಗಂಗಾರತ್ನ ವಸಂತ್, ಬೇಬಿ ಪಾಟಾಳಿ, ಗೀತಾ, ಮಧುರಾ, ವನಜ ಹರಿಣಾಕ್ಷಿ, ಬಾಬು ಗೌಡ, ಭುವನೇಶ್ವರ, ದಿನೇಶ್ ಅಗತ್ತಾಡಿ, ಚೆನ್ನಪ್ಪ ಗೌಡ, ಅಮೃತಾ ವಿಷಯ ಮಂಡಿಸಿ, ಮಾತನಾಡಿದರು.

ಪ್ರಭಾರ ಪಿಡಿಒ ಲಲಿತಾ ಸ್ವಾಗತಿಸಿ, ವಂದಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !