ಮಂಗಳವಾರ, ಸೆಪ್ಟೆಂಬರ್ 21, 2021
26 °C
ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚನೆ

ಅಚ್ಚುಕಟ್ಟಾಗಿ ಯೋಗ ದಿನ ಆಯೋಜಿಸಿ: ಜಿಲ್ಲಾಧಿಕಾರಿ ಆರತಿ ಆನಂದ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 21 ರಂದು ಆಯೋಜಿಸುವ 5ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಯಶಸ್ವಿಗೊಳಿಸುವ ದಿಸೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಾಮರಸ್ಯದಿಂದ ಕೆಲಸ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಹೇಳಿದರು.

ವಿಶ್ವ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಅಧಿಕಾರಿಗಳು ಜಿಲ್ಲೆಯಲ್ಲಿರುವ ಯೋಗ ಒಕ್ಕೂಟಗಳು, ಸರ್ಕಾರೇತರ ಸಂಸ್ಥೆಗಳು, ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು. ಸೇವಾ ಮನೋಭಾವ ಮತ್ತು ಶಿಸ್ತಿನಿಂದ ಯೋಗದ ಧ್ಯೇಯೋದ್ದೇಶ, ಮಹತ್ವವನ್ನು ಸಾರುವಂತೆ ಕಾರ್ಯಕ್ರಮ ನಡೆಯಬೇಕು’ ಎಂದು ತಿಳಿಸಿದರು.

‘ಜೂ.21 ರಂದು ಬೆಳಿಗ್ಗೆ 6.30ಕ್ಕೆ ಎಲ್ಲ ಅಧಿಕಾರಿಗಳು ಕ್ರೀಡಾಂಗಣದಲ್ಲಿ ಹಾಜರಿರಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಎಲ್ಲಾ ಕಲ್ಯಾಣಿಗಳನ್ನು ಸ್ವಚ್ಚಗೊಳಿಸಲಾಗುತ್ತಿದೆ. ಸ್ವಚ್ಛಗೊಂಡಿರುವ ಕಲ್ಯಾಣಿಗಳಲ್ಲಿ ಕೂಡ ಯೋಗ ದಿನಾಚರಣೆ ಹಮ್ಮಿಕೊಳ್ಳಬಹುದು’ ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಇಂದುಮತಿ ರವರು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಬಿ.ಎಂ. ರವಿಶಂಕರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ ಕುಮಾರ್, ವಿವಿಧ ಯೋಗ ಸಂಸ್ಥೆಯ, ಸಂಘದ ಪದಾಧಿಕಾರಿಗಳು ಮತ್ತು ಮುಖಂಡರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು