ಭಾರತ-ಇಂಗ್ಲೆಂಡ್ ಫೈನಲ್‌ಗೆ: ಗೂಗಲ್ ಸಿಇಒ ಸುಂದರ್ ಪಿಚ್ಚೈ ನಿರೀಕ್ಷೆ

ಮಂಗಳವಾರ, ಜೂನ್ 18, 2019
25 °C

ಭಾರತ-ಇಂಗ್ಲೆಂಡ್ ಫೈನಲ್‌ಗೆ: ಗೂಗಲ್ ಸಿಇಒ ಸುಂದರ್ ಪಿಚ್ಚೈ ನಿರೀಕ್ಷೆ

Published:
Updated:
Prajavani

ವಾಷಿಂಗ್ಟನ್: ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ ಎಂದು ಗೂಗಲ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸುಂದರ್ ಪಿಚ್ಚೈ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ತಾವು ಕ್ರಿಕೆಟ್ ಪ್ರೇಮಿ ಎಂದು 46 ವರ್ಷದ ಸುಂದರ್ ಹೇಳಿಕೊಂಡಿದ್ದಾರೆ. ಅವರು ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಬುಧವಾರ ಗ್ಲೋಬಲ್ ಲೀಡರ್‌ಷಿಪ್ ಪುರಸ್ಕಾರ ಸ್ವೀಕರಿಸಿದ ಅವರು ಮಾತನಾಡಿದರು.

‘ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಭಾರತ ತಂಡಗಳು ಆಡುವ ಸಾಧ್ಯತೆಯೇ ಹೆಚ್ಚು. ಆದರೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಕೂಡ ಉತ್ತಮವಾಗಿವೆ’ ಎಂದೂ ಹೇಳಿದರು.

‘ಅಮೆರಿಕಕ್ಕೆ ಬಂದ ಹೊಸತರಲ್ಲಿ ನಾನು ಬೇಸ್ ಬಾಲ್ ಆಡಲು ಪ್ರಯತ್ನಿಸಿದೆ. ಆಟ ಸ್ವಲ್ಪ ಕ್ಲಿಷ್ಟಕರವಾಗಿದೆ. ಮೊದಲ ಪಂದ್ಯದಲ್ಲಿ ಚೆಂಡನ್ನು ನನ್ನ ಹಿಂದೆ ಹೊಡೆದೆ. ಕ್ರಿಕೆಟ್‌ನಲ್ಲಿ ಈ ತರಹದ ಹೊಡೆತಕ್ಕೆ ಮೆಚ್ಚುಗೆ ಸಿಗುತ್ತದೆ. ಆದರೆ, ಇಲ್ಲಿ ಜನರು ಪ್ರತಿಕ್ರಿಯಿಸಲೇ ಇಲ್ಲ. ನನಗೆ ಕ್ರಿಕೆಟ್‌ ಬಹಳಷ್ಟು ಅಚ್ಚುಮೆಚ್ದು’ ಎಂದರು.

‘ಇಂಗ್ಲೆಂಡ್‌ನಲ್ಲಿ ವಿಶ್ವಕಪ್ ಟೂರ್ನಿ ನಡೆಯುತ್ತಿದೆ. ಅದೊಂದು ರೋಚಕ ಟೂರ್ನಿಯಾಗಿದೆ. ಭಾರತವು ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಲಿ’ ಎಂದು ಹಾರೈಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !