ಜಿಂದಾಲ್‌ಗೆ ಭೂಮಿ: ಇಂದು ಅಹೋರಾತ್ರಿ ಧರಣಿ

ಬುಧವಾರ, ಜೂನ್ 19, 2019
29 °C
ಬಿಜೆಪಿ ಪ್ರತಿಭಟನೆ: ವಿಧಾನಸೌಧಕ್ಕೆ ಮುತ್ತಿಗೆ ಯತ್ನ– ಬಂಧನ

ಜಿಂದಾಲ್‌ಗೆ ಭೂಮಿ: ಇಂದು ಅಹೋರಾತ್ರಿ ಧರಣಿ

Published:
Updated:
Prajavani

ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡುವ ರಾಜ್ಯ ಸರ್ಕಾರದ ವಿವಾದಾತ್ಮಕ ತೀರ್ಮಾನ ಮತ್ತು ಬರ ಪರಿಹಾರ ಕಾರ್ಯದಲ್ಲಿನ ವೈಫಲ್ಯ ಖಂಡಿಸಿ ಶುಕ್ರವಾರ ಬಿಜೆಪಿ ವತಿಯಿಂದ ಇಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ.

ನಗರದ ಆನಂದರಾವ್‌ ವೃತ್ತದ ಸಮೀಪ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಭಟನೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

‘ಕಳೆದ ಒಂದು ವರ್ಷದಿಂದ ಬೊಕ್ಕಸದ ಲೂಟಿ ನಡೆದಿದೆ. ಹಗರಣಗಳು ಕಣ್ಣೆದುರಲ್ಲೇ ಇದ್ದರೂ ಸಿದ್ದರಾಮಯ್ಯ ಏನೂ ಗೊತ್ತಿಲ್ಲದವರಂತೆ ವರ್ತಿಸುತ್ತಿದ್ದಾರೆ. ಸಾಲ ಮನ್ನಾ ಹೆಸರಲ್ಲಿ ರೈತರನ್ನು ವಂಚಿಸಲಾಗುತ್ತಿದೆ’ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಶಾಸಕ ಆರ್.ಅಶೋಕ ಆರೋಪಿಸಿದರು.

ಸಾಲ ಮನ್ನಾ ವಿಚಾರದಲ್ಲಿ ಉಂಟಾಗಿರುವ ಗೊಂದಲದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಗ್ರಾಮ ವಾಸ್ತವ್ಯಕ್ಕೆ ಮೊರೆ ಹೋಗಲಾಗಿದೆ ಎಂದು ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಟೀಕಿಸಿದರು. ಜಿಂದಾಲ್‌ಗೆ ಭೂಮಿ ನೀಡಿಕೆ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದರು.

ಸಂಸದ ತೇಜಸ್ವಿ ಸೂರ್ಯ, ಮುಖಂಡರಾದ ಎನ್.ರವಿಕುಮಾರ್, ತಮ್ಮೇಶ್‌ಗೌಡ, ಸಪ್ತಗಿರಿಗೌಡ ಇದ್ದರು. ಆನಂದರಾವ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿಧಾನಸೌಧದತ್ತ ಮೆರವಣಿಗೆಯಲ್ಲಿ ತೆರಳುತ್ತಿದ್ದಂತೆಯೇ ನೂರಾರು ಮಂದಿಯನ್ನು ಬಂಧಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !