ಮಾನ್ವಿಯಲ್ಲೂ ವಂಚನೆ

ಬುಧವಾರ, ಜೂನ್ 19, 2019
28 °C

ಮಾನ್ವಿಯಲ್ಲೂ ವಂಚನೆ

Published:
Updated:
Prajavani

ಮಾನ್ವಿ (ರಾಯಚೂರು ಜಿಲ್ಲೆ): ಬೆಂಗಳೂರಿನ ಐಎಂಎ ಕಂಪನಿ ಮಾನ್ವಿಯಲ್ಲಿಯೂ ಸಾರ್ವಜನಿಕರನ್ನೂ ವಂಚಿಸಿರುವುದು ಬೆಳಕಿಗೆ ಬಂದಿದೆ.

‘ಈ ಸಂಸ್ಥೆಯಲ್ಲಿ ನಾನು ಮಾರ್ಚ್‌ ತಿಂಗಳಲ್ಲಿ ಒಂದು ಲಕ್ಷ ಹೂಡಿಕೆ ಮಾಡಿದ್ದೇನೆ. ಈ ವರೆಗೂ ಬಡ್ಡಿ ನೀಡಿಲ್ಲ. ರಂಜಾನ್‌ ನಂತರ ಎರಡು ತಿಂಗಳ ಬಡ್ಡಿ ಹಣ ಒಟ್ಟಿಗೇ ಪಾವತಿಸುವುದಾಗಿ ಸಿಬ್ಬಂದಿ ಹೇಳಿದ್ದರು. ವಂಚನೆ ವಿರುದ್ಧ ದೂರು ದಾಖಲಿಸುತ್ತೇನೆ’ ಎಂದು ಇಲ್ಲಿಯ ಶಿಕ್ಷಕ ಜಲಾಲ್‌ ಪಾಷಾ ತಿಳಿಸಿದರು.

ತಪ್ಪಿತಸ್ಥರನ್ನು ನೇಣಿಗೇರಿಸಿ (ವಿಜಯಪುರ ವರದಿ): ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ನೇಣಿಗೆ ಹಾಕಬೇಕು’ ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಗ್ರವಾಗಿ ತನಿಖೆ ನಡೆಸಬೇಕು. ಇಂತಹ ವ್ಯವಹಾರ ನಡೆಸುವವರ ಮೇಲೆ ಸರ್ಕಾರ ನಿಗಾವಹಿಸಬೇಕು’ ಎಂದು ಆಗ್ರಹಿಸಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !