ಏಕೆ ಕ್ರಮ ಕೈಗೊಳ್ಳಬಾರದು: ಹೈಕೋರ್ಟ್‌

ಗುರುವಾರ , ಜೂನ್ 27, 2019
29 °C
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆರೆಗಳ ಕಣ್ಮರೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ

ಏಕೆ ಕ್ರಮ ಕೈಗೊಳ್ಳಬಾರದು: ಹೈಕೋರ್ಟ್‌

Published:
Updated:
Prajavani

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೆರೆಗಳ ಕಣ್ಮರೆಗೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ಮೌಖಿಕವಾಗಿ ಪ್ರಶ್ನಿಸಿದೆ.

‘ಬಿಬಿಎಂಪಿ ವ್ಯಾಪ್ಯಿಯಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸಬೇಕು’ ಎಂದು ಕೋರಿ ‘ಸಿಟಿಜನ್ಸ್‌ ಆ್ಯಕ್ಷನ್‌ ಗ್ರೂಪ್‌’ ಕಾರ್ಯದರ್ಶಿ ನೊಮಿತಾ ಚಾಂಡಿ, ‘ಜೆ.ಪಿ ನಗರ 4ನೇ ಹಂತದ ಡಾಲರ್ಸ್‌ ಲೇ ಔಟ್‌ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ’ದ ಕಾರ್ಯದರ್ಶಿ ಗುಂಡಾ ಭಟ್‌ ಮತ್ತು ‘ಸಮರ್ಪಣಾ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು, ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಎಚ್‌.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಪೀಠವು, ‘ಕೆರೆಗಳ ನಿರ್ವಹಣೆ ಮಾಡದೇ ಇರುವುದು ನಾಗರಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಿರುವ ಸಂಗತಿಯಲ್ಲವೇ, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸಂವಿಧಾನದ 21ನೇ ವಿಧಿಯ ಉಲ್ಲಂಘನೆ ಅನುಸಾರ ಏಕೆ ಕ್ರಮ ಕೈಗೊಳ್ಳಬಾರದು, ನಾಗರಿ ಕರು ಏಕೆ ಪರಿಹಾರ ಪಡೆಯಬಾರದು’ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿತು.

‘ರಾಜಕಾಲುವೆ, ಕೆರೆ ಒತ್ತುವರಿ ಸರ್ವೆ ಯಾವಾಗ ಮುಗಿಸುತ್ತೀರಿ ಮತ್ತು ಕೆರೆಗಳ ಬಗ್ಗೆ ಕೆರೆ ಅಭಿವೃದ್ಧಿ ಪ್ರಾಧಿಕಾರ ನೀಡಿರುವ ಹೇಳಿಕೆ ಬಗ್ಗೆ ಸರ್ಕಾರದ ವತಿಯಿಂದ ಮಾಹಿತಿ ನೀಡಿ’ ಎಂದು ಸರ್ಕಾರದ ಪರ ವಕೀಲ ಡಿ.ನಾಗರಾಜ ಅವರಿಗೆ ಸೂಚಿಸಿತು.

‘ಕೆರೆ ಒತ್ತುವರಿ ಆಕ್ಷೇಪಗಳಿಗೆ ಸಂಬಂ ಧಿಸಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಇದೇ 17ರಂದು ಸೂಕ್ತ ಆದೇಶ ನೀಡಲಾಗುವುದು’ ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !