ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ; ಫ್ಲೊರೆನ್ಸಿಕ್ ಸಾಕ್ಷ್ಯದ ಮೊರೆ ಹೋದ ಪೊಲೀಸರು

ಮಂಗಳವಾರ, ಜೂನ್ 25, 2019
26 °C

ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ; ಫ್ಲೊರೆನ್ಸಿಕ್ ಸಾಕ್ಷ್ಯದ ಮೊರೆ ಹೋದ ಪೊಲೀಸರು

Published:
Updated:
Prajavani

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಮಾನಸಿಕ ಅಸ್ವಸ್ಥ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫ್ಲೊರೆನ್ಸಿಕ್ ಸಾಕ್ಷ್ಯಕ್ಕಾಗಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆ ತಜ್ಞರ ಮೊರೆ ಹೋಗಿದ್ದಾರೆ.

ಗ್ರಾಮದಲ್ಲಿ ಮೇ 17ರಂದು ಗ್ರಾಮದೇವರ ಜಾತ್ರೆ ನಡೆದ ದಿನ ಮನೆಯವರು ದೇವಿಗೆ ಉಡಿ ತುಂಬಲು ದೇವಸ್ಥಾನಕ್ಕೆ ತೆರಳಿದ್ದು, ಸಂತ್ರಸ್ತೆ ಮನೆಯಲ್ಲಿ ಒಬ್ಬರೇ ಇರುವುದನ್ನು ಖಚಿತಪಡಿಸಿಕೊಂಡು ಅತ್ಯಾಚಾರ ನಡೆಸಿದ್ದನು. ಮೇ18 ಬಾದಾಮಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಹನುಮಂತ ಮಹಾಗುಂಡಪ್ಪ ಹುಲಸಗೇರಿ (32) ಎಂಬುವನನ್ನು ಬಂಧಿಸಲಾಗಿದೆ. 

ಅತ್ಯಾಚಾರದ ವೇಳೆ ಸಂತ್ರಸ್ತೆ ಮೆದುಳಿನ ಅಘಾತಕ್ಕೆ ಒಳಗಾಗಿ ಕೋಮಾ ಸ್ಥಿತಿಗೆ ತಲುಪಿದ್ದರು. ಅವರಿಗೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಜಿಲ್ಲಾಡಳಿತ ಕೂಡ ಆಕೆಯ ಚಿಕಿತ್ಸೆಗೆ ನೆರವಾಗಿತ್ತು. ‘ಚಿಕಿತ್ಸೆ ನಂತರ ಸಂತ್ರಸ್ತೆ ಈಗ ಚೇತರಿಸಿಕೊಂಡಿದ್ದಾರೆ. ಪ್ರಜ್ಞೆ ಬಂದಿದೆ. ಆಕೆ ಆರೋಪಿಯನ್ನು ಗುರುತಿಸಿದ್ದಾರೆ. ಆದರೂ ಪ್ರಕರಣದ ಗಂಭೀರವಾಗಿರುವ ಕಾರಣ ಫ್ಲೊರೆನ್ಸಿಕ್ ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಫ್ಲೊರೆನ್ಸಿಕ್ ಸಾಕ್ಷ್ಯ ಸಂಗ್ರಹ:

‘ಅತ್ಯಾಚಾರದ ವೇಳೆ ಸಂತ್ರಸ್ತೆಯ ಎದೆ ಹಾಗೂ ಕಾಲಿನ ಭಾಗಕ್ಕೆ ಆರೋಪಿ ಕಚ್ಚಿದ್ದು, ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಿಂದ ತಜ್ಞರನ್ನು ಕರೆಸಿ ಹಲ್ಲು, ಉಗುರಿನ ಗುರುತು ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ಕಲೆ ಹಾಕಿದ್ದು, ತಪಾಸಣೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಎಸ್‌ಪಿ ತಿಳಿಸಿದರು.

‘ದೆಹಲಿಯಲ್ಲಿ ನಿರ್ಭಯಾ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫ್ಲೊರೆನ್ಸಿಕ್ ಸಾಕ್ಷ್ಯ ಮಹತ್ವದ ಸಾಕ್ಷಿಯಾಗಿತ್ತು. ಆ ಪ್ರಕರಣದಲ್ಲೂ ಧಾರವಾಡದ ತಜ್ಞರೇ ಸಾಕ್ಷ್ಯ ಸಂಗ್ರಹಿಸಿದ್ದರು’ ಎಂದು ಹೇಳಿದರು.

ಅತ್ಯಾಚಾರಕ್ಕೆ ಪ್ರಯತ್ನಿಸಿ ಸಿಕ್ಕುಬಿದ್ದಿದ್ದನು:

ಆರೋಪಿ ಹನುಮಂತ ಈ ಹಿಂದೆಯೂ ಗ್ರಾಮದಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನು ಎನ್ನಲಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ಗುಳೇದಗುಡ್ಡ ಸಮೀಪದ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದನು. ಆಗ ಗ್ರಾಮಸ್ಥರೇ ಹಿಡಿದು ಒದ್ದು ಗುಳೇದಗುಡ್ಡ ಪೊಲೀಸರಿಗೆ ಒಪ್ಪಿಸಿದ್ದರು.

‘ಆಗ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಹನುಮಂತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿ ಊರಿಗೆ ಮರಳಿದ್ದನು’ ಎಂದು ಎಸ್‌ಪಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !