ಮಳೆಯ ಕೊರತೆ: ಬಿತ್ತನೆ ಕುಂಠಿತ

ಮಂಗಳವಾರ, ಜೂನ್ 18, 2019
26 °C

ಮಳೆಯ ಕೊರತೆ: ಬಿತ್ತನೆ ಕುಂಠಿತ

Published:
Updated:

ಬೆಂಗಳೂರು: ಈ ಮುಂಗಾರು ಹಂಗಾಮಿನಲ್ಲಿ ಮಳೆಯ ತೀವ್ರ ಕೊರತೆಯಿಂದ ಬಿತ್ತನೆ ಪ್ರಮಾಣವೂ ಕುಸಿತವಾಗಿದೆ ಎಂದು ಕೃಷಿ ಸಚಿವ ಎನ್.ಎಚ್‌. ಶಿವಶಂಕರರೆಡ್ಡಿ ತಿಳಿಸಿದರು.

ಈ ಬಾರಿ 76.69 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇತ್ತು. ಆದರೆ, ಜೂನ್‌ 13 ರವರೆಗೆ 6.17 ಲಕ್ಷ ಹೆಕ್ಟೇರ್‌ ಬಿತ್ತನೆಯಾಗಿದೆ. ಅಂದರೆ ಶೇ 8 ರಷ್ಟು ಮಾತ್ರ ಬಿತ್ತನೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 10.99 ಲಕ್ಷ ಹೆಕ್ಟೇರ್‌ ಬಿತ್ತನೆಯಾಗಿತ್ತು (ಶೇ 13.43) ಎಂದು ಅವರು ಹೇಳಿದರು.

ಮುಂಗಾರು ಹಂಗಾಮಿಗೆ 6.29 ಲಕ್ಷ ಕ್ವಿಂಟಲ್‌ ಬಿತ್ತನೆ ಬೀಜದ ಬೇಡಿಕೆ ಇದ್ದು, 10.82 ಲಕ್ಷ ಕ್ವಿಂಟಲ್‌ ಲಭ್ಯತೆ ಇದೆ. ಇದುವರೆಗೆ 36,065 ಕ್ವಿಂಟಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಇನ್ನೂ 10.46 ಲಕ್ಷ ಕ್ವಿಂಟಲ್‌ ದಾಸ್ತಾನು ಇದೆ ಎಂದರು.

ಈ ಬಾರಿ 22.45 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರಗಳ ಬೇಡಿಕೆ ಇದ್ದು, ಜೂನ್‌ ಅಂತ್ಯದವರೆಗೆ 6.38 ಲಕ್ಷ ಮೆಟ್ರಿಕ್‌ ಟನ್‌ಗಳಷ್ಟು ಸರಬರಾಜು ಆಗಿದ್ದು, ವಿವಿಧ ಜಿಲ್ಲೆಗಳಲ್ಲಿ 7.94 ಲಕ್ಷ ಮೆಟ್ರಿಕ್‌ ಟನ್‌ ದಾಸ್ತಾನು ಇದೆ ಎಂದು ರೆಡ್ಡಿ ತಿಳಿಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !