ಬಾಲಕನಿಂದ ಬಾಲಕಿಯ ಮೇಲೆ ಅತ್ಯಾಚಾರ

ಬುಧವಾರ, ಜೂನ್ 26, 2019
°C

ಬಾಲಕನಿಂದ ಬಾಲಕಿಯ ಮೇಲೆ ಅತ್ಯಾಚಾರ

Published:
Updated:

ಚಳ್ಳಕೆರೆ: ತಾಲ್ಲೂಕಿನ ಗ್ರಾಮವೊಂದರಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ಒಂಬತ್ತು ವರ್ಷದ ಬಾಲಕಿ ಮೇಲೆ 17 ವರ್ಷದ ಹುಡುಗನೊಬ್ಬ ಅತ್ಯಾಚಾರ ನಡೆಸಿದ್ದಾನೆ.

ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಹುಡುಗನನ್ನು ತಳುಕು ಠಾಣೆ ಪೊಲೀಸರು ವಶಕ್ಕೆ ಪಡೆದು, ಬಾಲ ನ್ಯಾಯಮಂಡಳಿಗೆ ಒಪ್ಪಿಸಿದ್ದಾರೆ.

ಬುಧವಾರ ಸಂಜೆ ಶಾಲೆ ಮುಗಿಸಿ ಬಂದಿದ್ದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಇದನ್ನು ಗಮನಿಸಿದ ಹುಡುಗನು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದಾಗಿ ರಾತ್ರಿ ಬಾಲಕಿಗೆ ಚಳಿ–ಜ್ವರ ಕಾಣಿಸಿಕೊಂಡಿದೆ. ತಂದೆ-ತಾಯಿ ಆಕೆಯನ್ನು ವಿಚಾರಿಸಿದಾಗ ಮೂತ್ರ ವಿಸರ್ಜನೆ ಮಾಡಲು ತೊಂದರೆಯಾಗುತ್ತಿದೆ ಎಂದು ಹೇಳಿದ್ದಳು. ಬಳಿಕ ಬಾಲಕಿಯನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯೆ ಶಮಾ ಪರ್ವೀನ್‌, ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದರಿಂದಲೇ ಮೂತ್ರ ವಿಸರ್ಜನೆಗೆ ತೊಂದರೆಯಾಗುತ್ತಿದೆ ಎಂದು ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶಿಕ್ಷೆ ವಿಧಿಸಲು ಮನವಿ: ಬಾಲಕಿಯ ಮೇಲೆ ಎಸಗಿದ ಅತ್ಯಾಚಾರ ಅಮಾನವೀಯವಾದುದು. ಆರೋಪಿಗೆ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಕೆ.ಪಿ.ಭೂತಯ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಮನವಿ ಮಾಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 2

  Sad
 • 1

  Frustrated
 • 2

  Angry

Comments:

0 comments

Write the first review for this !