ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ: ಸಿದ್ಧಗಂಗಾ ಶ್ರೀ ಪತ್ರ

ಭಾನುವಾರ, ಜೂನ್ 16, 2019
30 °C

ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ: ಸಿದ್ಧಗಂಗಾ ಶ್ರೀ ಪತ್ರ

Published:
Updated:
Prajavani

ತುಮಕೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ರೈತ ದೇಶದ ಬೆನ್ನೆಲುಬು. ರೈತರಿಗೆ ಯಾವುದೇ ರೀತಿಯ ಅನ್ಯಾಯ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ಈಗಾಗಲೇ ರೈತರಿಂದ ಮತ್ತು ರೈತ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸರ್ಕಾರವು ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ಅವರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಯ್ದೆಗಳನ್ನು ಜಾರಿಗೊಳಿಸಬೇಕು. ಇದರಿಂದ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ. ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗಳನ್ನು ಸಾವಧಾನವಾಗಿ ಪರಿಶೀಲಿಸಬೇಕು. ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 4

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !