ಶನಿವಾರ, ಸೆಪ್ಟೆಂಬರ್ 19, 2020
23 °C

ಬಸ್‌ ಪಾಸ್ ದರ ಸಂಜೆ ಹೆಚ್ಚಳ, ರಾತ್ರಿ ವಾಪಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿದ್ಯಾರ್ಥಿ ಬಸ್‌ ಪಾಸ್ ದರ ಹೆಚ್ಚಿಸಿ ಆದೇಶ ಹೊರಡಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ರಾತ್ರಿ ವೇಳೆಗೆ ನಿರ್ಧಾರ ವಾಪಸ್ ಪಡೆದಿದೆ.

ಕಳೆದ ವರ್ಷದ ಪಾಸಿನ ದರದಲ್ಲಿ ₹100ರಿಂದ ₹200ರ ವರೆಗೆ ಏರಿಸಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದ ನಿಗಮ, ರಾತ್ರಿ ಪರಿಷ್ಕೃತ ಆದೇಶ ಹೊರಡಿಸಿ ಹಳೇ ದರವನ್ನೇ ಉಳಿಸಿಕೊಳ್ಳುವುದಾಗಿ ತಿಳಿಸಿದೆ.

ಇದೇ 19ರಿಂದ (ಬುಧವಾರ) ಪಾಸ್ ವಿತರಣೆ ಮಾಡಲಾಗುವುದು. ‍ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿಗಮದ ವೆಬ್‌ಸೈಟ್‌ www.ksrtc.inನಲ್ಲಿ ವಿವರಗಳನ್ನು ಭರ್ತಿಗೊಳಿಸಿ, ಮುದ್ರಿತ ಅರ್ಜಿಗೆ ಶಾಲಾ–ಕಾಲೇಜು ಮುಖ್ಯಸ್ಥರಿಂದ ದೃಢೀಕರಣ ಪಡೆಯಬೇಕು. ನಂತರ ಶುಲ್ಕ ಪಾವತಿಸಿ ಪಾಸ್ ಪಡೆಯಬಹುದು ಎಂದು ಹೇಳಿದೆ.

ಆನ್‌ಲೈನ್ ವ್ಯವಸ್ಥೆ ಲಭ್ಯವಿಲ್ಲದ ವಿದ್ಯಾರ್ಥಿಗಳು ಕಳೆದ ವರ್ಷದಂತೆ ನಿಗಮದ ವೆಬ್‌ಸೈಟ್‌ ಅಥವಾ ಬಸ್ ನಿಲ್ದಾಣಗಳಲ್ಲಿ ಅರ್ಜಿ ಪಡೆದು ಭರ್ತಿ ಸಲ್ಲಿಸಲು ಅವಕಾಶ ಇದೆ. ವಿದ್ಯಾರ್ಥಿಗಳು ಉಚಿತವಾಗಿ ಬಸ್‌ಗಳಲ್ಲಿ ಸಂಚರಿಸಲು ಜೂನ್ 30ರವರೆಗೆ ಅವಕಾಶ ಇದೆ. ಅಷ್ಟರಲ್ಲಿ ಹೊಸ ಪಾಸ್ ಪಡೆದುಕೊಳ್ಳಬೇಕು ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕ ರಾಜೇಶ್  ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು