ರೋಹ್ಟಕ್‌ನಲ್ಲಿ ಹುಬ್ಬಳ್ಳಿಯ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

ಭಾನುವಾರ, ಜೂನ್ 16, 2019
28 °C
ಕಿರುಕುಳ ಆರೋಪ: ವಿಭಾಗದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲು

ರೋಹ್ಟಕ್‌ನಲ್ಲಿ ಹುಬ್ಬಳ್ಳಿಯ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಚಂಡಿಗಡ (ಪಿಟಿಐ): ಹರಿಯಾಣದ ರೋಹ್ಟಕ್‌ನಲ್ಲಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಹುಬ್ಬಳ್ಳಿಯ ಚೇತನ ಕಾಲೋನಿಯ ವೈದ್ಯಕೀಯ ವಿದ್ಯಾರ್ಥಿ ಓಂಕಾರ್‌ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಗುರುವಾರ ರಾತ್ರಿ ಅವರು ವಸತಿನಿಲಯದ ಕೊಠಡಿಯಲ್ಲಿ ನೇಣುಬಿಗಿದುಕೊಂಡಿದ್ದಾರೆ.

‘ಮಕ್ಕಳ ವೈದ್ಯಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಓಂಕಾರ್‌ ಅವರು ವಿಭಾಗದ ಮುಖ್ಯಸ್ಥರಿಂದ ಅತಿಯಾದ ಕಿರುಕುಳಕ್ಕೆ ಒಳಗಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ’ ಎಂದು ರೋಹ್ಟಕ್‌ ಪೊಲೀಸ್‌ ಠಾಣಾಧಿಕಾರಿ ಕೈಲಾಷ್‌ ಚಂದರ್‌ ತಿಳಿಸಿದ್ದಾರೆ.

‘ಆತ್ಮಹತ್ಯೆಗೆ ಕಾರಣವೇನು ಎನ್ನುವ ಬಗ್ಗೆ ಪತ್ರ ಬರೆದಿಟ್ಟಿಲ್ಲ. ವಿಭಾಗದ ಮುಖ್ಯಸ್ಥರ ಕಿರುಕುಳದ ಬಗ್ಗೆ  ಓಂಕಾರ್‌ ಅವರ ಸಹೋದ್ಯೋಗಿಗಳು ಮತ್ತು ಕುಟುಂಬದವರು ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಸ್ವತಃ ತಂಗಿಯ ಮದುವೆಗೆ ಹಾಜರಾಗಲು ಓಂಕಾರ್‌ ಅವರಿಗೆ ರಜೆ ನೀಡಿರಲಿಲ್ಲ. ಇದರಿಂದ ಅವರು ಖಿನ್ನತೆಗೊಳಗಾಗಿದ್ದರು. ವಿಭಾಗದ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಸಲಾಗುತ್ತಿದೆ’ ಎಂದು ಇನ್‌ಸ್ಪೆಕ್ಟರ್‌ ಹೇಳಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಓಂಕಾರ್‌ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅವರು ತಿಳಿಸಿದ್ದಾರೆ.  ವಿಭಾಗದ ಮುಖ್ಯಸ್ಥರನ್ನು ಬಂಧಿಸುವಂತೆ ಓಂಕಾರ್ ಸಹೋದ್ಯೋಗಿಗಳು ಪ್ರತಿಭಟನೆಯನ್ನೂ ನಡೆಸಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !