ಮಂಗಳವಾರ, ಆಗಸ್ಟ್ 3, 2021
20 °C

ರಾಜೀನಾಮೆಗೆ ಟಿಟಿಡಿ ಅಧ್ಯಕ್ಷ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಮರಾವತಿ: ‘ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಎಲ್ಲರೂ ರಾಜೀನಾಮೆ ನೀಡಬೇಕು ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷವು ಷಡ್ಯಂತ್ರ ರೂಪಿಸುತ್ತದೆ. ಆದರೆ ನಾನಾಗಲಿ, ಆಡಳಿತ ಮಂಡಳಿಯ ಇತರರಾಗಲಿ ರಾಜೀನಾಮೆ ನೀಡುವುದಿಲ್ಲ’ ಎಂದು ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ, ತೆಲುಗು ದೇಶಂ ಪಕ್ಷದ ಮುಖಂಡ ಪುಟ್ಟಾ ಸುಧಾಕರ ಯಾದವ್‌ ಸ್ಪಷ್ಟಪಡಿಸಿದ್ದಾರೆ.

ದೇವಸ್ಥಾನದ ಆಡಳಿತದ ಮೇಲೆ ಹಿಡಿತ ಸಾಧಿಸಲು ಸರ್ಕಾರ ಮತ್ತು ಈಗಿನ ಆಡಳಿತ ಮಂಡಳಿ ನಡುವೆ ಹಗ್ಗ ಜಗ್ಗಾಟ ಆರಂಭವಾಗಿದೆ. ಈ ವಿಚಾರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಕೋರ್ಟ್‌ ಮೊರೆಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರ ನಡುವೆಯೇ ದೇವಸ್ಥಾನದ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ ಕುಮಾರ್ ಸಿಂಘಾಲ್‌ ಅವರು, ಅಧ್ಯಕ್ಷರು ನಡೆಸಿದ್ದಾರೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಕುರಿತಂತೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

‘ದೇವಸ್ಥಾನದ ಆಡಳಿತ ಮಂಡಳಿ ರಾಜೀನಾಮೆ ನೀಡುವುದೆಂದು ಹೊಸ ಸರ್ಕಾರ ನಿರೀಕ್ಷಿಸಿತ್ತು. ಆದರೆ, ಈಗಿನ ಮಂಡಳಿಗೆ ಇನ್ನು ಒಂದು ವರ್ಷ ಅವಧಿ ಬಾಕಿ ಇದೆ. ಮಂಡಳಿಯ ಯಾರೂ ರಾಜೀನಾಮೆ ಸಲ್ಲಿಸದಿರಲು ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

‘ನನ್ನ ವಿರುದ್ಧದ ಭ್ರಷ್ಟಾಚಾರ ಆರೋಪ ಆಧಾರರಹಿತ. ಆರೋಪಗಳ ಬಗ್ಗೆ ಸರ್ಕಾರ ತನಿಖೆ ನಡೆಸಲಿ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು