ಸಿ.ಎಂ ವಿರುದ್ಧ ಟೀಕೆ: ವ್ಯಕ್ತಿ ಬಂಧನ

ಮಂಗಳವಾರ, ಜೂನ್ 18, 2019
23 °C

ಸಿ.ಎಂ ವಿರುದ್ಧ ಟೀಕೆ: ವ್ಯಕ್ತಿ ಬಂಧನ

Published:
Updated:

ಅಗರ್ತಲ (ಪಿಟಿಐ): ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್‌ ಕುಮಾರ್‌ ದೇವ್‌ ಅವರ ವೈಯಕ್ತಿಕ ಜೀವನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಪ್ರಕಟಿಸಿದ ಆರೋಪಕ್ಕಾಗಿ ದೆಹಲಿ ಮೂಲದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಅನುಪಮ್‌ ಪೌಲ್‌ ಬಂಧಿತ ಆರೋಪಿ. ಈತ ಏ‍ಪ್ರಿಲ್‌ 25ರಂದು ಮುಖ್ಯಮಂತ್ರಿ ಅವರನ್ನು ಟೀಕಿಸಿ ಬರೆದಿದ್ದ.

ಬಂಧನದ ಬಳಿಕ ತ್ರಿಪುರ ಪೊಲೀಸರು ದೆಹಲಿ ನ್ಯಾಯಾಲಯದಲ್ಲಿ ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ವಶಕ್ಕೊಪ್ಪಿಸಬೇಕೆಂದು ಪೊಲೀಸರು ಸಲ್ಲಿಸಿದ ಮನವಿಯನ್ನು ದೆಹಲಿ ನ್ಯಾಯಾಲಯ ಪುರಸ್ಕರಿಸಿದೆ. ‘ಪ್ರಕರಣದ ವಿಚಾರಣೆಗಾಗಿ ಆರೋಪಿಯನ್ನು ತ್ರಿಪುರಕ್ಕೆ ಕರೆದುಕೊಂಡು ಹೋಗಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !