ಶಾರದಾ ಡೈಮಂಡ್‌ : ಎಫ್‌ಐಆರ್‌ಗೆ ತಡೆ

ಗುರುವಾರ , ಜೂನ್ 27, 2019
30 °C

ಶಾರದಾ ಡೈಮಂಡ್‌ : ಎಫ್‌ಐಆರ್‌ಗೆ ತಡೆ

Published:
Updated:

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧದ ಎಫ್‌ಐಆರ್‌ ಮತ್ತು ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾದ ಮಂಡಿಸಿದ ವಕೀಲ ಎಂ.ಅರುಣ್‌ ಶ್ಯಾಮ್‌, ‘ಅರ್ಜಿದಾರರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ–2000ರ ಕಲಂ 66 ‘ಎ’ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಆದರೆ, ‘ಸುಪ್ರೀಂ’ ಈ ಕಲಂ ಅನ್ನು 2015ರಲ್ಲೇ ರದ್ದುಗೊಳಿಸಿದೆ. ಒತ್ತಡಕ್ಕೆಮಣಿದು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !