ತಂದೆ ಮಾಡಿದ ಸಾಲಕ್ಕೆ ನೇಣಿಗೆ ಶರಣಾದ ಪುತ್ರಿ

ಸೋಮವಾರ, ಜೂನ್ 24, 2019
29 °C

ತಂದೆ ಮಾಡಿದ ಸಾಲಕ್ಕೆ ನೇಣಿಗೆ ಶರಣಾದ ಪುತ್ರಿ

Published:
Updated:

ಕೆ.ಆರ್.ನಗರ (ಮೈಸೂರು ಜಿಲ್ಲೆ):  ತಂದೆ ಮಾಡಿದ್ದ ಸಾಲ ತೀರಿಸದೇ ನ್ಯಾಯಾಲಯದಿಂದ ನೋಟಿಸ್‌ ಬಂದಿದ್ದಕ್ಕಾಗಿ, ತಾಲ್ಲೂಕಿನ ಅಡಗೂರು ಗ್ರಾಮದ ಸೌಮ್ಯಾ (17) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯಾ ತಂದೆ ಮುತ್ತುರಾಜ್‌ ಎರಡು ವರ್ಷಗಳ ಹಿಂದೆ ನಿಧನರಾಗಿದ್ದು, ತಾಲ್ಲೂಕಿನ ಬಡಕನಕೊಪ್ಪಲು ಗ್ರಾಮದ ಮಹದೇವ್ ಎಂಬುವವರ ಬಳಿ ₹ 75 ಸಾವಿರ ಸಾಲ ಪಡೆದಿದ್ದರು. ಅವರ ನಿಧನಾನಂತರ ತಾಯಿ ಮಮತಾ ಮೇಲೆ ಸಾಲ ತೀರಿಸುವಂತೆ ಮಹದೇವ್‌ ಒತ್ತಡ ಹೇರುತ್ತಿದ್ದರು. ಈ ಕುಟುಂಬದ ವಿರುದ್ಧ ಇಲ್ಲಿನ ನ್ಯಾಯಾಲಯದಲ್ಲಿ ಪ್ರಕರಣವನ್ನೂ ದಾಖಲಿಸಿದ್ದರು. ಮೂರು ದಿನಗಳ ಹಿಂದೆಯಷ್ಟೇ ನೋಟಿಸ್‌ ಸಹ ಬಂದಿತ್ತು. ಇದರಿಂದ ನೊಂದ ಸೌಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವ್ ಅವರನ್ನು ವಶಕ್ಕೆ ಪಡೆದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಪಿಐ ಪಿ.ಕೆ.ರಾಜು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !