ಮಹಿಷಿ ವರದಿ ಆಶಯಕ್ಕೆ ಧಕ್ಕೆ; ಪ್ರತಿಭಟನೆ

ಗುರುವಾರ , ಜೂನ್ 27, 2019
30 °C
‘ಕರ್ನಾಟಕ ವಿಕಾಸ ರಂಗ’ ನೇತೃತ್ವದಲ್ಲಿ ಧ್ವನಿ ಎತ್ತಿದ ಹೋರಾಟಗಾರರು

ಮಹಿಷಿ ವರದಿ ಆಶಯಕ್ಕೆ ಧಕ್ಕೆ; ಪ್ರತಿಭಟನೆ

Published:
Updated:
Prajavani

ಬೆಂಗಳೂರು: ‘ಕನ್ನಡಿಗರ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ಸರೋಜಿನಿ ಮಹಿಷಿ ಅವರು ನೀಡಿರುವ ವರದಿಯ ಮೂಲ ಆಶಯಕ್ಕೆ ರಾಜ್ಯ ಸರ್ಕಾರ ಧಕ್ಕೆ ತಂದಿದೆ’ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರರು ನಗರದ ಪುರಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. 

‘ಕರ್ನಾಟಕ ವಿಕಾಸ ರಂಗ’ ನೇತೃತ್ವದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಂಶೋಧಕ ಎಂ. ಚಿದಾನಂದ ಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್, ಬಿ.ಟಿ.ಲಲಿತಾ ನಾಯಕ್ ಮೊದಲಾದವರು ಪಾಲ್ಗೊಂಡಿದ್ದರು.

‘ವರದಿಯನ್ನೇ ಬುಡಮೇಲು ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದ್ದು ಖಂಡನೀಯ. ಅಧಿಸೂಚನೆಯನ್ನು ಕೂಡಲೇ ಹಿಂಪಡೆದು ಮೂಲ ಆಶಯಕ್ಕೆ ತಕ್ಕಂತೆ ಹೊಸದಾಗಿ ಅಧಿಸೂಚನೆ ಹೊರಡಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಕನ್ನಡಿಗರು ಎಂದು ಗುರುತಿಸಲು ಕನಿಷ್ಠ 10ನೇ ತರಗತಿಯವರೆಗೆ ಕನ್ನಡವನ್ನು ವಿಷಯವಾಗಿ ಅಭ್ಯಾಸ ಮಾಡಿರಬೇಕು. ಕರ್ನಾಟಕದಲ್ಲಿ 15 ವರ್ಷ ಕಡ್ಡಾಯವಾಗಿ ನೆಲೆಸಿರಬೇಕು ಎಂಬ ಅಂಶ ವರದಿಯಲ್ಲಿದೆ. ಇದನ್ನು ಬದಲಾಯಿಸಿ ಬೇಡವಾದ ಅಂಶಗಳನ್ನು ಅಧಿಸೂಚನೆಯಲ್ಲಿ ಸೇರಿಸಲಾಗಿದೆ’ ಎಂದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !