ನಿರೀಕ್ಷಿತ ಮಟ್ಟದ ಕೆಲಸ ನಡೆದಿಲ್ಲ: ತನ್ವೀರ್‌ ಸೇಠ್‌

ಗುರುವಾರ , ಜೂಲೈ 18, 2019
29 °C
‘ಕೆಲಸ ಮಾಡುವವರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು’

ನಿರೀಕ್ಷಿತ ಮಟ್ಟದ ಕೆಲಸ ನಡೆದಿಲ್ಲ: ತನ್ವೀರ್‌ ಸೇಠ್‌

Published:
Updated:
Prajavani

ಮೈಸೂರು: ‘ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಮೈತ್ರಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಳೆದ ಒಂದು ವರ್ಷದಲ್ಲಿ ಜಾರಿಯಾದ ಯೋಜನೆಗಳ ಫಲಿತಾಂಶ ಏನಾಗಿದೆ ಎಂಬುದು ಗೊತ್ತಾಗುತ್ತಿಲ್ಲ’ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಶನಿವಾರ ಇಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯ ಆಪರೇಷನ್ ಕಮಲದ ಕಾಟ ಹಾಗೂ ಹಲವು ಚುನಾವಣೆಗಳಿಂದಾಗಿ ಅಭಿವೃದ್ಧಿ ಕೆಲಸಗಳಿಗೆ ಹಿನ್ನಡೆ ಉಂಟಾಗಿದೆ. ಹೀಗಾಗಿ, ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮುಂದಾದರೂ ಸರಿಯಾಗಿ ಕೆಲಸ ಮಾಡಬೇಕು’ ಎಂದರು.

‘ನಾನು ಪಕ್ಷದ ಹಿರಿಯ ನಾಯಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವುದು ನಿಜ. ಸಚಿವ ಸಂಪುಟವನ್ನು ಪುನರ್‌ ರಚಿಸಬೇಕು. ಕೆಲಸ ಮಾಡುವವರಿಗೆ ಹೆಚ್ಚಿನ ಅವಕಾಶ ಕೊಡಬೇಕು ಎಂದು ಕೇಳಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಕಂಡಿರುವ ನಾವು, ಸದ್ಯಕ್ಕೆ ಪಕ್ಷದ ಸಂಘಟನೆ ಹಾಗೂ ಉಳಿವಿಗೆ ಹೆಚ್ಚು ಒತ್ತು ನೀಡಬೇಕಿದೆ’ ಎಂದು ಹೇಳಿದರು.

‘ಪಕ್ಷ ವಿರೋಧಿ ಚಟುವಟಿಕೆ ನಡೆಸುವುದಿಲ್ಲ. ಆದರೆ, ಮೈತ್ರಿ ಸರ್ಕಾರದ ಸಚಿವರ ಕಾರ್ಯವೈಖರಿ, ಈಗಿನ ಕಾರ್ಯಕ್ರಮಗಳು ಹಾಗೂ ಹಿಂದಿನ ಕಾಂಗ್ರೆಸ್‌ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚಿಸುತ್ತೇವೆ. ಸರ್ಕಾರ ಮತ್ತು ಪಕ್ಷವನ್ನು ಯಾವ ದಿಕ್ಕಿನಲ್ಲಿ ಮುಂದೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಮಾನ ಮನಸ್ಕ ಶಾಸಕರು ಚರ್ಚಿಸುತ್ತೇವೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !