ನೀರು ಸಂಗ್ರಹವೇ ಪರಿಹಾರ
ನೀರು ಹಾಗೂ ಇತರ ಮೂಲಸೌಕರ್ಯ ಕಲ್ಪಿಸದೇ ಅಪಾರ್ಟ್ಮೆಂಟ್ ಸಮುಚ್ಚಯಗಳನ್ನು ಮಾರಾಟ ಮಾಡುತ್ತಿರುವುದರಿಂದ, ಬೆಂಗಳೂರಿನಲ್ಲಿ ಐದು ವರ್ಷ ಹೊಸ ಅಪಾರ್ಟ್ಮೆಂಟ್ಗಳ ನಿರ್ಮಾ ಣಕ್ಕೆ ಅವಕಾಶ ನೀಡದಿರುವ ಬಗ್ಗೆ ಸರ್ಕಾರ ಚಿಂತನೆ ತೇಲಿ ಬಿಟ್ಟಿದೆ. ಅಪಾರ್ಟ್ಮೆಂಟ್ಗಳಲ್ಲಿ ನೀರಿನ ಸರಾಸರಿ ಬಳಕೆ ಎಷ್ಟು ಎಂಬ ಬಗ್ಗೆ ಮೊದಲು ಮಾಹಿತಿ ಕಲೆಹಾಕಬೇಕು. ಒಂದು ಅಪಾರ್ಟ್ಮೆಂಟ್ ನಿರ್ಮಾಣಗೊಂಡರೆ ಅಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಸಲಾಗಿದೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಈ ವ್ಯವಸ್ಥೆ ಇಲ್ಲವಾದರೆ ಸಮುಚ್ಚಯಗಳ ಮಾರಾಟಕ್ಕೆ ಅವಕಾಶ ಕೊಡಬಾರದು. ಮಳೆ ನೀರು ಸಂಗ್ರಹದಿಂದ ಲಕ್ಷಾಂತರ ಲೀಟರ್ ನೀರು ಸಂಗ್ರಹವಾಗಿ, ಪಾಲಿಕೆ ಮೇಲಿನ ನೀರಿನ ಅವಲಂಬನೆ ಕಡಿಮೆಯಾಗುತ್ತದೆ.
-ಮಂಜುನಾಥ್ ಜೈನ್ ಎಂ.ಪಿ., ಮಂಡ್ಯ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.