ಅಗ್ನಿ ಅವಘಡ ಸುರಕ್ಷತೆ: ಅಧಿಕಾರಿಗಳ ಖುದ್ದು ಭೇಟಿಗೆ ನಿರ್ದೇಶನ

ಸೋಮವಾರ, ಜೂಲೈ 15, 2019
25 °C

ಅಗ್ನಿ ಅವಘಡ ಸುರಕ್ಷತೆ: ಅಧಿಕಾರಿಗಳ ಖುದ್ದು ಭೇಟಿಗೆ ನಿರ್ದೇಶನ

Published:
Updated:

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಮಾರುಕಟ್ಟೆ ಸಂಕೀರ್ಣಗಳಲ್ಲಿ ಒತ್ತುವರಿ ತೆರವು ಹಾಗೂ ಸುರಕ್ಷತಾ ಕ್ರಮ ಅಳವಡಿಸಿರುವ ಪ್ರಗತಿ ಕುರಿತು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನಿರ್ದೇಶಿಸಿದೆ. ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.

ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ‘ಕೆ.ಆರ್. ಮಾರುಕಟ್ಟೆ ಸಹಿತ ನಗರದ ಎಲ್ಲ ಮಾರುಕಟ್ಟೆ ಸಂಕೀರ್ಣಗಳಲ್ಲಿರುವ ಅನಧಿಕೃತ ಮಳಿಗೆ ತೆರವುಗೊಳಿಸಬೇಕು.ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಶಿಫಾರಸು ಮಾಡಿರುವ 19 ಅಂಶಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು’ ಎಂದು ಆದೇಶಿಸಿತ್ತು. ಕೆ.ಆರ್‌.ಮಾರುಕಟ್ಟೆ ಸಂಕೀರ್ಣದ ಅಗ್ನಿ ಅವಘಡ ತುರ್ತು ನಿರ್ಗಮನದ ಸ್ಥಳ ಮತ್ತು ಸಾರ್ವಜನಿಕ ಪಡಸಾಲೆಯಲ್ಲಿ ನಿರ್ಮಿಸಿರುವ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವಂತೆ ಕೋರಿ ಬೆಂಗಳೂರು ‘ಹೂ ವ್ಯಾಪಾರಿಗಳ ಸಂಘ’ ಈ ಅರ್ಜಿ ಸಲ್ಲಿಸಿದೆ. ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !