₹2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಶುಕ್ರವಾರ, ಜೂಲೈ 19, 2019
24 °C

₹2 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

Published:
Updated:
Prajavani

ಯಲಹಂಕ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣ ರಸ್ತೆಯ ಎಂವಿಐಟಿ ಕ್ರಾಸ್‌ನಿಂದ ತಿಮ್ಮಸಂದ್ರ ಮಾರ್ಗವಾಗಿ ರಾಜಾನುಕುಂಟೆಯವರೆಗೆ ₹2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಈ ರಸ್ತೆಯು ಸುಮಾರು 10 ಕಿ.ಮೀ ದೂರವಿದ್ದು, ಈಗಾಗಲೆ ಆರೇಳು ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಬಾಕಿಯಿರುವ ಮೂರ್ನಾಲ್ಕು ಕಿಲೋಮೀಟರ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ಮತ್ತು ಅಂತರರಾಷ್ಟ್ರೀಯ ವಿಮಾನನಿಲ್ದಾಣ ಮುಖ್ಯರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಈ ರಸ್ತೆಯನ್ನು ಸದಾ ಕಾಲ ಸುಸ್ಥಿತಿಯಲ್ಲಿಡುವ ಅವಶ್ಯಕತೆಯಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !