ಶುಕ್ರವಾರ, ನವೆಂಬರ್ 15, 2019
21 °C

ಕಾಗೋಡು ಆರೋಗ್ಯದಲ್ಲಿ ಚೇತರಿಕೆ

Published:
Updated:
Prajavani

ಸಾಗರ: ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ದಿಢೀರ್ ಏರಿಳಿತ ಕಂಡುಬಂದಿದ್ದರಿಂದ ಗುರುವಾರ ರಾತ್ರಿ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ಎರಡು ದಿನಗಳಿಂದ ಕಾಗೋಡು ಅವರು ವಿಪರೀತ ಸುಸ್ತು ಹಾಗೂ ಶೀತಬಾಧೆಯಿಂದ ಬಳಲುತ್ತಿದ್ದರು. ಗುರುವಾರ ರಾತ್ರಿ 12 ಗಂಟೆ ಸುಮಾರಿಗೆ ರಕ್ತದೊತ್ತಡ ಹಾಗೂ ಉಸಿರಾಟದಲ್ಲಿ ತೊಂದರೆ ಕಂಡುಬಂದಿತು. ಹಾಗಾಗಿ, ಸ್ಥಳೀಯ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅವರಿಗೆ ಶುಕ್ರವಾರ ಬೆಳಿಗ್ಗೆ ಸ್ವಲ್ಪ ಹೊತ್ತು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರು ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)