ಅಕ್ರಮ ಗೋ ಸಾಗಣೆ ಶಂಕೆ: ಗೂಡ್ಸ್‌ ವಾಹನದ ಮೇಲೆ ದಾಳಿ

ಬುಧವಾರ, ಜೂಲೈ 17, 2019
24 °C

ಅಕ್ರಮ ಗೋ ಸಾಗಣೆ ಶಂಕೆ: ಗೂಡ್ಸ್‌ ವಾಹನದ ಮೇಲೆ ದಾಳಿ

Published:
Updated:

ಮಂಗಳೂರು: ನಗರದ ಕುಲಶೇಖರ ಸಿಲ್ವರ್ ಗೇಟ್ ಬಳಿ ಭಾನುವಾರ ಬೆಳಿಗ್ಗೆ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದಾರೆ ಎಂಬ ಸಂಶಯದ ಮೇಲೆ ಮೂವರಿದ್ದ ತಂಡ, ಮಾವಿನಕಾಯಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ತಡೆದು ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದೆ.

ವಾಹನದಲ್ಲಿದ್ದ ಅಶ್ಫಾಕ್‌, ಫಾರೂಕ್, ಲತೀಫ್ ಎಂಬವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳು ₹70,000 ನಗದನ್ನು ದೋಚಿಕೊಂಡು ಹೋಗಿದ್ದಾರೆ ಎಂದು ಹಲ್ಲೆಗೊಳಗಾದವರು ದೂರಿದ್ದಾರೆ.

ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಗೋ ಸಾಗಣೆಯ ಶಂಕೆ ಮೇಲೆ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗಾಗಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಸುತ್ತಲಿನ ಪ್ರದೇಶಗಳಲ್ಲಿ ಈ ರೀತಿಯ ದಾಳಿಗಳಲ್ಲಿ ಭಾಗಿಯಾಗಿರುವ 30ಕ್ಕೂ ಹೆಚ್ಚು ಹಳೆಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಸಂದೀಪ ಪಾಟೀಲ್‌ ತಿಳಿಸಿದ್ದಾರೆ.

‘ಸ್ಥಳದಲ್ಲಿ ಇರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !