ಶುಕ್ರವಾರ, ಏಪ್ರಿಲ್ 16, 2021
28 °C
ಶಾಸಕರ ಖರೀದಿ ಅಣಕ: ಕಾಂಗ್ರೆಸ್ ಪ್ರತಿಭಟನೆ ಸ್ಥಳದಲ್ಲಿ ಕುದುರೆ ಪ್ರದರ್ಶನ

‘ಸರ್ಕಾರ ಕೆಡವಲು ಬಿಜೆಪಿ ಷಡ್ಯಂತ್ರ‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ‘ಕುತಂತ್ರದ ಮೂಲಕ ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಅವರು ತಮ್ಮ ಪ್ರಯತ್ನ ಕೈಬಿಡಬೇಕು’ ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ‘ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗಾಳಿಗೆ ತೂರಿ ಸಂವಿಧಾನದತ್ತ ಸಂಸ್ಥೆಗಳಾದ ಸಿಬಿಐ, ಇಡಿ ಮೊದಲಾದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ನಡೆಯುತ್ತಿದೆ‘ ಎಂದು ಆರೋಪಿಸಿದರು.

‘ಸರ್ಕಾರ ರಚನೆಯಾದ ದಿನದಿಂದಲೂ ಬಿಜೆಪಿಯವರು ವಾಮಮಾರ್ಗದ ಮೂಲಕ ಅಧಿಕಾರ ಪಡೆದುಕೊಳ್ಳಲು ಹವಣಿಸುತ್ತಿದ್ದಾರೆ. ಇದಕ್ಕಾಗಿ ಸರ್ಕಾರ ನಡೆಯುವುದಕ್ಕೆ ಅವಕಾಶವನ್ನೇ ಕೊಡದೇ ಅತಂತ್ರಗೊಳಿಸಲು ಯತ್ನಿಸುತ್ತಲೇ ಬಂದಿದ್ದಾರೆ. ಆಪರೇಷನ್ ಕಮಲದ ಮೂಲಕ ನಮ್ಮ  ಶಾಸಕರಿಗೆ ಹಣ ಮೊದಲಾದ ಆಸೆ–ಆಮಿಷ ಒಡ್ಡುತ್ತಿದ್ದಾರೆ. ಬ್ಲಾಕ್‌ಮೇಲ್ ಕೂಡ ಮಾಡುತ್ತಿದ್ದಾರೆ’ ಎಂದು ಆರೋ‍ಪಿಸಿದರು.

‘ಕುಮಾರಸ್ವಾಮಿ ನೇತೃತ್ವದ ಸರ್ಕಾರ ರೈತರ ಸಾಲ ಮನ್ನಾದಂತಹ ಜನಪರ ಕಾರ್ಯಕ್ರಮ ಜಾರಿ ಮಾಡಿದೆ. ಅದನ್ನು ಬಿಜೆಪಿ ಸಹಿಸುತ್ತಿಲ್ಲ‘ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಂ.ಸೌದಾಗರ, ಪ್ರಧಾನ ಕಾರ್ಯದರ್ಶಿ ಅನಿಲ್ ದಡ್ಡಿ, ಎ.ಎ.ದಂಡಿಯಾ, ಬಸುಮೇಟಿ, ಶಂಭುಲಿಂಗ ಅಕ್ಕಿಮರಡಿ ಮತ್ತಿತರರು ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು