ಶುಕ್ರವಾರ, ಏಪ್ರಿಲ್ 23, 2021
31 °C

ಸಿಎಂ ರಾಜೀನಾಮೆಗೆ ಆಗ್ರಹ; ಬಿಜೆಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ರಾಜ್ಯ ಸಮ್ಮಿಶ್ರ ಸರ್ಕಾರ ಅಲ್ಪ ಮತಕ್ಕೆ ಕುಸಿದಿದ್ದು, ಬಹುಮತ ಕಳೆದುಕೊಂಡಿದೆ. ಹಾಗಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಮಂಗಳವಾರ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಮಾತನಾಡಿ, ‘ಸಮ್ಮಿಶ್ರ ಸರ್ಕಾರ  ಜನರ ನಿರೀಕ್ಷೆಗಳನ್ನು ಹುಸಿ ಮಾಡಿದೆ. ಆಡಳಿತದಲ್ಲಿ ಮುಂದುವರಿಯಲು ನೈತಿಕ ಹಕ್ಕಿಲ್ಲ’ ಎಂದರು.  ‘ಬಿಜೆಪಿ ಸಂಖ್ಯಾಬಲ 107ಕ್ಕೆ ಏರಿಕೆಯಾಗಿದೆ. 13 ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರದ ಸಂಖ್ಯಾಬಲ 104ಕ್ಕೆ ಕುಸಿದಿದೆ. ಆದ್ದರಿಂದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ರೈತರ ಹೆಸರಿನಲ್ಲಿ ಬೂಟಾಟಿಕೆ ನಡೆಸುತ್ತಿರುವ ಸಮ್ಮಿಶ್ರ ಸರ್ಕಾರ ಪತನವಾಗಬೇಕು. ಆರಿಸಿ ಕಳುಹಿಸಿದ ಜನರಿಗೆ ಮೋಸ ಮಾಡಿ ರಾಜೀನಾಮೆ ನಾಟಕವಾಡುತ್ತಿದ್ದಾರೆ. ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸಬೇಕು’ ಎಂದು ಮುಖಂಡ ಅಶೋಕ ಲಿಂಬಾವಳಿ ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಹೂವಪ್ಪ ರಾಠೋಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜು ರೇವಣಕರ, ಶಶಿಕಾಂತ ವಿಶ್ವಬ್ರಾಹ್ಮಣ, ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ್, ಮುಖಂಡರಾದ ಬಸವರಾಜ ಯಂಕಂಚಿ, ಅನಿತಾ ಸರೋದೆ, ಸರಸ್ವತಿ ತಳವಾರ, ಶೋಭಾರಾವ್, ಸವಿತಾ ಲೆಂಕನವರ ಪಾಲ್ಗೊಂಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು