ಎರಡು ಬೈಕ್‌ಗಳಿಗೆ ಕಾರು ಡಿಕ್ಕಿ: ಇಬ್ಬರು ಸಾವು

ಗುರುವಾರ , ಜೂಲೈ 18, 2019
28 °C

ಎರಡು ಬೈಕ್‌ಗಳಿಗೆ ಕಾರು ಡಿಕ್ಕಿ: ಇಬ್ಬರು ಸಾವು

Published:
Updated:

ಮಂಡ್ಯ: ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿ ಹೊಸಬೂದನೂರು ಗೇಟ್‌ಬಳಿ ಕಾರೊಂದು ಎರಡು ಬೈಕ್‌ಗಳಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸೋಮವಾರ ರಾತ್ರಿ ಇಬ್ಬರು ಮೃತಪಟ್ಟು ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ಉಮ್ಮಡಹಳ್ಳಿ ಗ್ರಾಮದ ಜಯಮ್ಮ (45), ಬೇವಿನಹಳ್ಳಿ ಗ್ರಾಮದ ಚೇತನ್‌ (40) ಮೃತಪಟ್ಟವರು. ಕುಡಿದು ಅತಿ ವೇಗದಿಂದ ಕಾರು ಚಾಲನೆ ಮಾಡುತ್ತಾ ಬೆಂಗಳೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ಚಾಲಕ ಮುಂದೆ ತೆರಳುತ್ತಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆಸಿದ್ದಾನೆ. ಒಂದು ಬೈಕ್‌ ಸವಾರ ಚೇತನ್‌, ಇನ್ನೊಂದು ಬೈಕ್‌ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಜಯಮ್ಮ  ಮೃತ ಪಟ್ಟಿದ್ದಾರೆ. ಮತ್ತೊಬ್ಬ ಬೈಕ್‌ ಸವಾರ ಮಹಾದೇವ್‌ ತೀವ್ರವಾಗಿ ಗಾಯಗೊಂಡಿದ್ದು ನಗರದ ಮಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಚಾಲಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !