ಮೇಲಧಿಕಾರಿ ಆದೇಶ ಪರಿಪಾಲನೆ

7

ಮೇಲಧಿಕಾರಿ ಆದೇಶ ಪರಿಪಾಲನೆ

Published:
Updated:

ಯಲಬುರ್ಗಾ: ತಾಲ್ಲೂಕಿನ ದ್ಯಾಂಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮಂದಾಕಿನಿಬಾಯಿ ಅವರ ಅಮಾನತಿಗೆ ಸಂಬಂಧಿಸಿದಂತೆ ಮೇಲಧಿಕಾರಿಗಳ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಲಾಗಿದೆ ಹೊರೆತು ಯಾವುದೇ ದುರುದ್ದೇಶದಿಂದ ಅಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಹೇಳಿದರು.‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು,  ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಚನ್ನಬಸಪ್ಪ ಮರಡಿ ಹಾಗೂ ವಿನೋದಕುಮಾರ ಸಸಿಮಠ ಅವರು ಶಾಲಾ ಕೊಠಡಿಗಳ ಛಾವಣಿ ದುರಸ್ತಿ ಕಾಮಗಾರಿಯಲ್ಲಿ ರೂ. 1.50 ಲಕ್ಷ ದುರುಪಯೋಗವಾಗಿದೆ. ಕೇವಲ ರೂ. 50 ಸಾವಿರದಲ್ಲಿ ಬೇಕಾಬಿಟ್ಟಿಯಾಗಿ ಕೆಲಸಮಾಡಲಾಗಿದೆ.ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯೋಪಾಧ್ಯಾಯಿನಿ ವಿರುದ್ಧ ಕೊಪ್ಪಳದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರು ನೀಡಿದ್ದನ್ನು ದಾಖಲೆ ಸಮೇತ ವಿವರಿಸಿದರು. ಪ್ರಾಥಮಿಕ ತನಿಖಾ ವರದಿಯಲ್ಲಿ ಮೇಲ್ನೋಟಕ್ಕೆ ಆರೋಪದಲ್ಲಿ ಸತ್ಯಾಂಶ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಶಿಸ್ತು ಪ್ರಾಧಿಕಾರಿಗಳಾದ ಬಿ,ವಿ. ರಾಜೇಂದ್ರಪ್ರಸಾದ್ ಈ ಕ್ರಮ ಕೈಗೊಂಡಿದ್ದಾರೆ. ಆದರೆ ಸಂಘದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಇದಕ್ಕೆ ಕಾರಣ ಎಂದು ಟೀಕಿಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.ವರದಿಯಲ್ಲಿ ತಪ್ಪಿತಸ್ಥರಿಗೆ ಇಂತಹದೇ ಕ್ರಮ ಕೈಗೊಳ್ಳುವಂತೆ ತಿಳಿಸಿಲ್ಲ. ಆ ರೀತಿ ಬರೆಯುವ ಅಧಿಕಾರವೂ ಇಲ್ಲ. ಆದರೂ ಸಂಘದ ಪದಾಧಿಕಾರಿಗಳು ಈ ರೀತಿ ತಮ್ಮ ವಿರುದ್ಧ ಟೀಕಿಸುತ್ತಿರುವುದರ ಹಿನ್ನೆಲೆ ಏನೆಂಬುದು ತಿಳಿಯುತ್ತಿಲ್ಲ ಎಂದರು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘ ಹಾಗೂ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry