ಬುಧವಾರ, ಏಪ್ರಿಲ್ 21, 2021
25 °C

ಶಾಸಕರ ಮನೆ ಮುಂದೆ ಧರಣಿ: ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಸದ್ಯ ಇರುವ ಬರಗಾಲದ ಸ್ಥಿತಿ ನಿಭಾಯಿಸಬೇಕಾದ ಶಾಸಕರು ರೆಸಾರ್ಟ್ ರಾಜಕಾರಣದಲ್ಲಿ ಮುಳುಗಿದ್ದು, ಕೂಡಲೇ ಇದನ್ನು ನಿಲ್ಲಿಸದಿದ್ದರೆ ಎಲ್ಲಾ ಶಾಸಕರ ಮನೆಗಳ ಮುಂದೆ ಧರಣಿ ನಡೆಸಲಾಗುವುದು ಎಂದು ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾಸ್ವಾಮಿ ಎಚ್ಚರಿಸಿದರು.

ರಾಜ್ಯದಲ್ಲಿ ಬರಗಾಲದ ಸ್ಥಿತಿ ಇದೆ. ಈ ಸಂದರ್ಭದಲ್ಲಿ ಮತದಾರರ ಸಮಸ್ಯೆಗೆ ಸ್ಪಂದಿಸುವುದು ಜನಪ್ರತಿನಿಧಿಗಳ ಕರ್ತವ್ಯ. ಅದನ್ನು ಮರೆತು ಪಕ್ಷೇತರರು ಆದಿಯಾಗಿ ಎಲ್ಲಾ ಪಕ್ಷದ ಶಾಸಕರು ರೆಸಾರ್ಟ್ ಮತ್ತು ಐಷಾರಾಮಿ ಹೋಟೆಲ್ ಸೇರಿದ್ದಾರೆ ಎಂದು ಅವರು ಸುದ್ದಿಗೋಷ್ಠೀಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರು ಇದೇ ರೀತಿಯ ವರ್ತನೆ ಮುಂದುವರಿಸಿದರೆ ಎಲ್ಲರ ರಾಜೀನಾಮೆಗೆ ಒತ್ತಾಯಿಸಿ ಅವರ ಮನೆ ಮುಂದೆಯೇ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.