ಸೋಮವಾರ, ಆಗಸ್ಟ್ 19, 2019
22 °C

ತ್ರಿವಳಿ ತಲಾಖ್‌: ಪಿಐಎಲ್‌ ಸಲ್ಲಿಕೆ

Published:
Updated:

ಬೆಂಗಳೂರು: ತ್ರಿವಳಿ ತಲಾಕ್ ಪದ್ದತಿ ನಿಷೇಧಿಸಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಮುಸ್ಲಿಂ ಮಹಿಳೆಯರ (ಮದುವೆ ಮೇಲಿನ ಹಕ್ಕಿನ ರಕ್ಷಣೆ) ಕಾಯ್ದೆ-2019’ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಗರದ ಸಾಮಾಜಿಕ ಕಾರ್ಯಕರ್ತ ಮೊಹಮದ್ ಆರೀಫ್‌ ಜಮೀಲ್ ಸಲ್ಲಿಸಿರುವ ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

‘ಕಾಯ್ದೆಯು ಸಂವಿಧಾನದ 14,15,21 ಹಾಗೂ 25ರ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ. ಅರ್ಜಿದಾರರ ಪರ ರಹಮತ್‌ ಉಲ್ಲಾ ಕೊತ್ವಾಲ್‌ ವಕಾಲತ್ತು ಸಲ್ಲಿಸಿದ್ದಾರೆ.

 

 

Post Comments (+)