ಭಾನುವಾರ, ಆಗಸ್ಟ್ 18, 2019
23 °C

ಅನುದಾನಕ್ಕೆ ಆಗ್ರಹ ಕಾಂಗ್ರೆಸ್‌ನಿಂದ ಪ್ರತಿಭಟನೆ

Published:
Updated:
Prajavani

ಯಲಹಂಕ: ಥಣಿಸಂದ್ರ ವಾರ್ಡ್‌ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗಾಗಿ ಹಿಂದಿನ ಸರ್ಕಾರದಲ್ಲಿ ಬಿಡುಗಡೆಯಾಗಿದ್ದ ಅನುದಾನವನ್ನು ಈಗಿನ ಬಿಜೆಪಿ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. 

ಥಣಿಸಂದ್ರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು. 

ಪಕ್ಷದ ಮುಖಂಡ ಪಳನಿ ವೆಂಕಟೇಶ್, ‘ಥಣಿಸಂದ್ರ ವಾರ್ಡ್‌ ವ್ಯಾಪ್ತಿಯಲ್ಲಿ ಅಂದಾಜು 2 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ
ಯಿದೆ. ಈ ವಾರ್ಡ್‌ಗೆ ಮೂಲಸೌಕರ್ಯಗಳನ್ನು ಒದಗಿಸಲು ಹಿಂದಿನ ಸಮ್ಮಿಶ್ರ ಸರ್ಕಾರ ಬಿಡುಗಡೆಗೊಳಿಸಿದ್ದ ಸುಮಾರು ₹100 ಕೋಟಿಗೂ ಹೆಚ್ಚಿನ ಅನುದಾನವನ್ನು ತಡೆಹಿಡಿಯಲಾಗಿದೆ’ ಎಂದು ಆರೋಪಿಸಿದರು.

ತಡೆ ಹಿಡಿದಿರುವ ಅನುದಾನ ಬಿಡುಗಡೆ ಮಾಡಬೇಕು ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್‌ ಮೋಹನ್‌ದಾಸ್‌ ಅವರಿಗೆ ಮನವಿ ಸಲ್ಲಿಸಿದರು. 

ಪಕ್ಷದ ಮುಖಂಡರಾದ ಎಂ.ಜಯ ಗೋಪಾಲಗೌಡ, ಎನ್.ಎನ್.ಶ್ರೀನಿವಾಸಯ್ಯ, ಎಚ್.ಎ. ಶಿವಕುಮಾರ್, ಸಂತೋಷ್ ಬೆಳ್ಳುಟ್ಟಿ, ಕಾಶಿ ಮಂಜುನಾಥ್, ಮಹೇಶ್ ಪಾಲ್ಗೊಂಡಿದ್ದರು.

 

Post Comments (+)