ಶನಿವಾರ, ಆಗಸ್ಟ್ 24, 2019
27 °C

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ವಿಜಯಲಕ್ಷ್ಮಿ ಆರ್.ಎಲ್.ಜಾಲಪ್ಪ ಎಜುಕೇಶನ್‌ ಫೌಂಡೇಷನ್‌ ವತಿಯಿಂದ ಆರ್ಯ ಈಡಿಗ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಈಡಿಗ ಸಮಾಜದ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಕೂಲಿ ಕಾರ್ಮಿಕರ ಕುಟುಂಬದ ಮಕ್ಕಳಿಗೆ ಮತ್ತು ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಪದವಿ ಅಭ್ಯಾಸ ಮಾಡುತ್ತಿರುವವರಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಈ ಹಿಂದಿನ ವರ್ಷಗಳಲ್ಲಿ ಫೌಂಡೇಷನ್‌ನಿಂದ ವಿದ್ಯಾರ್ಥಿ ವೇತನ ಪಡೆದವರು, ಕಳೆದ ಸಾಲಿಗಿಂತ ಹೆಚ್ಚು ಅಂಕಗಳನ್ನು ಹೊಂದಿರಬೇಕು. ಹೊಸದಾಗಿ ಅರ್ಜಿ ಸಲ್ಲಿಸುವವರು ಮೊದಲನೇ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಸೆಪ್ಟೆಂಬರ್‌ 15 ಕೊನೆಯ ದಿನ.

ಅರ್ಹ ವಿದ್ಯಾರ್ಥಿಗಳು www.jalappaedufoundation.org ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು ಅಥವಾ ನಂ. 126, ಸಿಲ್ವರ್‌ ಸ್ಟಾರ್‌ ಹೋಟೆಲ್‌, ಕೆಳಮಹಡಿ, 6ನೇ ಅಡ್ಡರಸ್ತೆ, ಗಾಂಧಿನಗರ, ಬೆಂಗಳೂರು– 560009 ಈ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು.  ಮಾಹಿತಿಗೆ, 9900355995.

 

Post Comments (+)