ಸೋಮವಾರ, ಆಗಸ್ಟ್ 19, 2019
28 °C

ಬೀದಿಗೆ ಬಿದ್ದವರು ಪರಿತಪಿಸದಿರಲಿ

Published:
Updated:

ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ₹ 5 ಲಕ್ಷ ಪರಿಹಾರ ಘೋಷಿಸಿರುವುದೇನೋ ಸರಿ. ಆದರೆ, ಸಾವಿರಾರು ಕುಟುಂಬಗಳು ತಮ್ಮ ಮನೆಗಳಿಗೆ ನುಗ್ಗಿದ ನೀರಿನಿಂದ ಅಗತ್ಯ ದಾಖಲೆಗಳನ್ನು ಕಳೆದುಕೊಂಡಿರುತ್ತವೆ. ರೇಷನ್ ಕಾರ್ಡ್, ಆಧಾರ್ ಕಾರ್ಡ್, ಖಾತೆ, ಪಹಣಿ ಅಥವಾ ಇನ್ನಿತರ ಕಾಗದ ಪತ್ರಗಳು ಸಿಗದೇ ಅವರು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು. ಹೀಗೆ ಎಲ್ಲವನ್ನೂ ಕಳೆದುಕೊಂಡು ಬರಿಗೈಯಲ್ಲಿ ಇರುವವರನ್ನು ಸಂಬಂಧಪಟ್ಟ ಇಲಾಖೆ ಅಥವಾ ಅಧಿಕಾರಿಗಳು ದಾಖಲೆಗಾಗಿ ಪೀಡಿಸದಂತೆ ಸರ್ಕಾರ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಸಂತ್ರಸ್ತ ಕುಟುಂಬಗಳು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ.

ಅಶ್ವತ್ಥ ಕಲ್ಲೇದೇವರಹಳ್ಳಿ, ಕಡೂರು

Post Comments (+)