ಭಾನುವಾರ, ಆಗಸ್ಟ್ 18, 2019
22 °C

ಕೋಮಲ್‌ ಮೇಲೆ ಹಲ್ಲೆ: ಕೊಲೆ ಯತ್ನ ಪ್ರಕರಣ ದಾಖಲು

Published:
Updated:

ಬೆಂಗಳೂರು: ಚಿತ್ರನಟ ಕೋಮಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಜಯ್‌ ವಿರುದ್ಧ ಮಲ್ಲೇಶ್ವರ ಪೊಲೀಸರು ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಕ್ಕರಾಯನಕೆರೆ ನಿವಾಸಿಯಾದ ವಿಜಯ್ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಹಾಗೂ ಇತರೆ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಲಾಗಿದೆ ಎಂದು ಪೊಲೀಸರು ಹೇಳಿದರು.

‘ಘಟನೆಯ ಸಂದರ್ಭದಲ್ಲಿ ಕೋಮಲ್ ಅವರು ಅವಾಚ್ಯ ಶಬ್ದಗಳಿಂದ ನನ್ನನ್ನು ನಿಂದಿಸಿದ್ದರು. ಹೀಗಾಗಿ ಕೋಪಗೊಂಡು ಹಲ್ಲೆ ನಡೆಸಿದೆ’ ಎಂದು ವಿಜಯ್‌ ಹೇಳಿಕೆ ನೀಡಿದ್ದಾನೆ. ಆತನ ವಿರುದ್ಧ ಈವರೆಗೂ ಯಾವುದೇ ಪ್ರಕರಣಗಳು ದಾಖಲಾಗಿಲ್ಲ’ ಎಂದೂ ಮಲ್ಲೇಶ್ವರ ಪೊಲೀಸರು ತಿಳಿಸಿದರು.

Post Comments (+)