ಮಂಗಳವಾರ, ನವೆಂಬರ್ 12, 2019
20 °C
ಅಣ್ವಸ್ತ್ರ ಒಪ್ಪಂದ ಪಾಲಿಸಲು ಇರಾನ್‌ ಒತ್ತಾಯ

‘ಕಠಿಣ ನಿರ್ಧಾರಕ್ಕೆ ಹಿಂಜರಿಯುವುದಿಲ್ಲ’

Published:
Updated:
Prajavani

ಟೆಹರಾನ್‌ (ಎಎಫ್‌ಪಿ): ‘ಅಣ್ವಸ್ತ್ರ ನೀತಿಗೆ ಸಂಬಂಧಿಸಿದ ಒಪ್ಪಂದದ ಅನ್ವಯವೇ ಐರೋಪ್ಯ ರಾಷ್ಟ್ರಗಳು ನಡೆದುಕೊಳ್ಳದಿದ್ದರೆ ಯಾವುದೇ ರೀತಿಯ ಕಠಿಣ ನಿರ್ಧಾರ ಕೈಗೊಳ್ಳಲು ಹಿಂಜರಿಯುವುದಿಲ್ಲ’ ಎಂದು ಇರಾನ್‌ ಅಧ್ಯಕ್ಷ ಹಸ್ಸನ್‌ ರೌಹಾನಿ, ಫ್ರಾನ್ಸ್‌ ಅಧ್ಯಕ್ಷ ಎಮ್ಯಾನ್ಯುಯಲ್‌ ಮ್ಯಾಕ್ರಾನ್‌ ಅವರಿಗೆ ಕಠಿಣ ಮಾತುಗಳಲ್ಲಿ ತಿಳಿಸಿದ್ದಾರೆ.

ಆದರೆ, ಯಾವ ರೀತಿ ಕ್ರಮ ಎನ್ನುವುದನ್ನು ಸ್ಪಷ್ಟಪಡಿಸಿಲ್ಲ. ಅಣು ಒಪ್ಪಂದದಿಂದ ಅಮೆರಿಕ ಹಿಂದೆ ಸರಿದ ಬಳಿಕ ಕೊಲ್ಲಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿತ್ತು. ಈ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಲು ಮ್ಯಾಕ್ರಾನ್‌ ಪ್ರಯತ್ನ ನಡೆಸುತ್ತಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರೌಹಾನಿ ಜತೆ ಮಾತುಕತೆ ನಡೆಯುವ ಆಶಾಭಾವ ವ್ಯಕ್ತಪಡಿಸಿದ್ದಾರೆ. ಆದರೆ, ಇರಾನ್‌ ಮೇಲೆ ವಿಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕುವವರೆಗೆ ಅಮೆರಿಕ ಜತೆ ಮಾತುಕತೆ ಸಾಧ್ಯವಿಲ್ಲ ಎಂದು ರೌಹಾನಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

‘ಅಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಅಮೆರಿಕ ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಂಡಿತು. ಬಳಿಕ, ಒಪ್ಪಂದವನ್ನು ಅನುಷ್ಠಾನಗೊಳಿಸುವ ಸಂಬಂಧ, ಐರೋಪ್ಯ ರಾಷ್ಟ್ರಗಳು ತಮ್ಮ ಬದ್ಧತೆಯನ್ನು ವ್ಯಕ್ತಪಡಿಸುವ ಕ್ರಮಗಳನ್ನು ಕೈಗೊಳ್ಳಲಿಲ್ಲ’ ಎಂದು ಮ್ಯಾಕ್ರಾನ್‌ ಅವರೊಂದಿಗೆ ದೂರವಾಣಿಯಲ್ಲಿ ನಡೆಸಿದ ಮಾತುಕತೆ ಸಂದರ್ಭದಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)