ಶುಕ್ರವಾರ, ನವೆಂಬರ್ 15, 2019
22 °C

ಕೆಎಸ್‌ಆರ್‌ಟಿಸಿಗೆ ಯು.ಪಿ ತಂಡ

Published:
Updated:
Prajavani

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಅಳವಡಿಸಿಕೊಂಡಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಪಡೆಯಲು ಉತ್ತರ ಪ್ರದೇಶದ ಸಾರಿಗೆ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಭೇಟಿ ನೀಡಿತ್ತು.

ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆ (ಯುಪಿಎಸ್‌ಆರ್‌ಟಿಸಿ) ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ್ ನೇತೃತ್ವದ ತಂಡ ಕೆಎಸ್‌ಆರ್‌ಟಿಸಿ 4ನೇ ಘಟಕಕ್ಕೆ ಭೇಟಿ ನೀಡಿತ್ತು. ಈ ವೇಳೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರಿಂದ ತಂತ್ರಜ್ಞಾನ, ಬಸ್ ನಿರ್ಮಾಣ ಮತ್ತು ನಿರ್ವಹಣೆ, ಪಾರ್ಸೆಲ್ ಕೊರಿಯರ್ ವ್ಯವಸ್ಥೆ, ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ವ್ಯವಸ್ಥೆ, ಬಸ್ ನಿಲ್ದಾಣಗಳಲ್ಲಿನ ಸೌಲಭ್ಯಗಳು, ಪರಿಸರ ಸ್ನೇಹಿ ಉಪಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಪ್ರತಿಕ್ರಿಯಿಸಿ (+)