ಶುಕ್ರವಾರ, ನವೆಂಬರ್ 22, 2019
25 °C

ಕನಕಪುರ ಬಂದ್‌ಗೆ ಕರೆ

Published:
Updated:
Prajavani

ರಾಮನಗರ: ಶಿವಕುಮಾರ್ ಬಂಧನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ‌ ಡಿಕೆಶಿ ಬೆಂಬಲಿಗರು ಬುಧವಾರ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ.

ಶಾಸಕ ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿ ಪ್ರತಿಭಟನೆಗಳು ನಡೆದವು.

ಡಿಕೆಶಿ ಸ್ವಕ್ಷೇತ್ರವಾದ ಕನಕಪುರದಲ್ಲಿ ಬೀದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಬಹುತೇಕ ರಸ್ತೆಗಳನ್ನು ಬಂದ್ ಮಾಡಿದರು. ಚನ್ನಬಸಪ್ಪ ವೃತ್ತದಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ಕನಕಪುರದಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿತ್ತು.

ರಾಮನಗರದ ಐಜೂರು ವೃತ್ತದಲ್ಲೂ ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)