ಶುಕ್ರವಾರ, ನವೆಂಬರ್ 15, 2019
27 °C

ಬಾಗಲಕೋಟೆಯಲ್ಲಿ ನೆರೆ ಸಂತ್ರಸ್ತರ ಅಧಿವೇಶನ 15ರಂದು

Published:
Updated:

ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ, ಬಾಗಲಕೋಟೆಯಲ್ಲಿ ಸೆ.15ರಂದು ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನ ಹಮ್ಮಿಕೊಳ್ಳಲಾಗಿದೆ.

‘ಪ್ರವಾಹ ಪೀಡಿತ ಪ್ರದೇಶಗಳಿಗೆ ನೆರವು ನೀಡಲು ನಿರ್ಲಕ್ಷ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ಅಧಿವೇಶನ ಹಮ್ಮಿಕೊಳ್ಳಲಾಗಿದೆ. ನವನಗರದ ಕಾಳಿದಾಸ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಜನಪರ ಚಿಂತಕರು ಮತ್ತು ಹೋರಾಟಗಾರರು ಪಾಲ್ಗೊಳ್ಳಲಿದ್ದಾರೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 

ಪ್ರತಿಕ್ರಿಯಿಸಿ (+)