ಮಂಗಳವಾರ, ನವೆಂಬರ್ 19, 2019
27 °C

‘ಯಡಿಯೂರಪ್ಪ ಜೈಲಿಗೆ ಹೋದಾಗ ಸಂಭ್ರಮಿಸಿದ್ದ ಕಾಂಗ್ರೆಸ್‌’

Published:
Updated:

 ಬೆಂಗಳೂರು: ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಜೈಲಿಗೆ ಹೋದಾಗ ಸಂಭ್ರಮಿಸಿದ್ದ ಕಾಂಗ್ರೆಸ್‌ ಡಿ.ಕೆ.ಶಿವಕುಮಾರ್‌ ಬಂಧನಕ್ಕೆ, ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದರು.

‘ಶಿವಕುಮಾರ್‌ ಬಂಧನಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅವರು ಜೈಲಿಗೆ ಹೋಗಲಿ ಎಂದು ನಾವು ಎಂದೂ ಬಯಸಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರಾಜಭವನ ಕಾಂಗ್ರೆಸ್‌ ಭವನದಂತಾಗಿತ್ತು. ತಮಗೆ ಬೇಕಾದಂತೆ ಆಟವಾಡಿದ್ದರು’ ಎಂದೂ ಅವರು ಹೇಳಿದರು.

 

ಪ್ರತಿಕ್ರಿಯಿಸಿ (+)