ಮಂಗಳವಾರ, ನವೆಂಬರ್ 12, 2019
21 °C

ಪ್ರಧಾನಿ ಮೋದಿ - ಇಮ್ರಾನ್ ಖಾನ್ ಒಂದೇ ತಾಯಿ ಮಕ್ಕಳು: ರಮಾನಾಥ ರೈ ವಾಗ್ದಾಳಿ

Published:
Updated:

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಒಂದೇ ಮನೋಭಾವ ಹೊಂದಿರುವ, ಒಂದೇ ತಾಯಿಯ ಮಕ್ಕಳು ಇದ್ದಂತೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ವಾಗ್ದಾಳಿ ನಡೆಸಿದರು

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ಅವರು ತಮ್ಮ ಸ್ವಾರ್ಥ ಸಾಧನೆಗಾಗಿ ದೇಶವನ್ನೇ ಬಲಿ ಕೊಡುತ್ತಿದ್ದಾರೆ. ಇಂಥವರಿಂದ ಅಭಿವೃದ್ಧಿ ಬಯಸುವುದು ಕನಸಿನ ಮಾತು. ದೇಶದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದರೆ, ಅತ್ತ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ ಅವರು ಅದೇ ರೀತಿಯಲ್ಲಿ ಭಾರತವನ್ನು ಮೂದಲಿಸುತ್ತಾರೆ’ ಎಂದು ಹೇಳಿದರು.

‘ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ನಾವು ಹಿಂದೂಗಳೇ, ನಾವು ಹಿಂದುತ್ವದ ಮೇಲೆ ಅಪಾರ ನಂಬಿಕೆ ಇಟ್ಟವರು. ಅವರೊಬ್ಬರೇ ಹಿಂದೂವಲ್ಲ. ನಾವು ಕೂಡಾ ಹಿಂದುತ್ವದ ತಳಹದಿಯ ಆಧಾರದ ಮೇಲೆ ರಾಜಕಾರಣ ಮಾಡುತ್ತಿದ್ದೇವೆ’ ಎಂದರು.

ಪ್ರತಿಕ್ರಿಯಿಸಿ (+)