ಮಂಗಳವಾರ, ನವೆಂಬರ್ 19, 2019
28 °C

24 ಗಂಟೆಯಲ್ಲೇ ₹ 34.72 ಲಕ್ಷ ದಂಡ

Published:
Updated:

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದವರಿಂದ 24 ಗಂಟೆಯಲ್ಲೇ ₹ 34.72 ಲಕ್ಷ ದಂಡ ಸಂಗ್ರಹಿಸಲಾಗಿದೆ.

‘ಸಂಚಾರ ನಿಯಮ ಉಲ್ಲಂಘಿಸುವವರಿಗೆ ವಿಧಿಸುವ ದಂಡದ ಮೊತ್ತವನ್ನು ಹೆಚ್ಚಳ ಮಾಡಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸುವವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದ ಭಾನುವಾರ ಬೆಳಿಗ್ಗೆಯವರೆಗೆ 9,956 ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಬಿ.ಆರ್.ರವಿಕಾಂತೇಗೌಡ ತಿಳಿಸಿದರು.

‘ಸವಾರರು ಹೆಲ್ಮೆಟ್ ಧರಿಸದ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದ, ನಿಗದಿಗಿಂತ ಹೆಚ್ಚು ಸರಕು ಸಾಗಿಸುತ್ತಿದ್ದ ಪ್ರಕರಣಗಳೇ ಹೆಚ್ಚಿವೆ. ಪಾನಮತ್ತರಾಗಿ ವಾಹನ ಚಲಾಯಿಸಿದ್ದ 427 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಅವರಿಗೆಲ್ಲ ನ್ಯಾಯಾಲಯವೇ ದಂಡ ವಿಧಿಸಲಿದೆ’ ಎಂದು ಮಾಹಿತಿ ನೀಡಿದರು. 

ಪ್ರತಿಕ್ರಿಯಿಸಿ (+)