ಗುರುವಾರ , ನವೆಂಬರ್ 21, 2019
26 °C

ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ 477 ಹುದ್ದೆಗಳು

Published:
Updated:

ಎಸ್‌ಬಿಐ ಸಂಸ್ಥೆಯು ಖಾಲಿ ಇರುವ 477 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. 

ಹುದ್ದೆ ಹೆಸರು: ಎಸ್‌ಬಿಐ ಡೆವಲಪರ್, ಸಿಸ್ಟಮ್ ಅಥವಾ ಸರ್ವರ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳು.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂ.ಸಿ.ಎ, ಎಂ.ಎಸ್‌.ಸಿ, ಪದವಿ, ಬಿ.ಇ, ಬಿ.ಟೆಕ್ ಪೂರೈಸಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷ ವಯೋಮಿತಿ ಇರಬೇಕು.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ₹ 125 ಮತ್ತು ಇತರೆ ಅಭ್ಯರ್ಥಿಗಳಿಗೆ ₹ 750 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಸ್ಥಳ: ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧವಿರಬೇಕು.

ಕೊನೆಯ ದಿನ: 25 ಸೆಪ್ಟೆಂಬರ್‌ 2019.

ಪ್ರತಿಕ್ರಿಯಿಸಿ (+)