ಮಂಗಳವಾರ, ನವೆಂಬರ್ 19, 2019
25 °C

ಮದ್ಯಪಾನದಿಂದ ದೂರ ಇರಲು ಸಲಹೆ

Published:
Updated:
Prajavani

ತೀರ್ಥಹಳ್ಳಿ: ಕುಡಿತದ ಚಟಕ್ಕೆ ಬಲಿಯಾಗಿ ಸಂಸಾರ, ಆರೋಗ್ಯವನ್ನು ಹಾಳುಮಾಡಿಕೊಳ್ಳುವುದರಿಂದ ಜನರು ದೂರ ಇರಬೇಕು. ಕುಡಿತದ ದುಷ್ಪರಿಣಾಮಗಳ ಬಗ್ಗೆ ಮಹಾತ್ಮ ಗಾಂಧೀಜಿ ಬಹಳ ಹಿಂದೆಯೇ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದರು ಎಂದು ಕಾಂಗ್ರೆಸ್‌ ಮುಖಂಡ ಕಿಮ್ಮನೆ ರತ್ನಾಕರ ಹೇಳಿದರು.

ಗುರುವಾರ ತಾಲ್ಲೂಕಿನ ಸೀತೂರು ವನದುರ್ಗಿ ದೇವಸ್ಥಾನದ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಂಡಿದ್ದ 1398ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮದ್ಯಪಾನ ಕೇವಲ ವ್ಯಕ್ತಿಯನ್ನು ಮಾತ್ರ ಸುಡುವುದಿಲ್ಲ. ಅದು ಕುಟುಂಬ, ಸಮಾಜಕ್ಕೆ ಅಂಟಿದ ಶಾಪವಾಗಿದೆ ಎಂದು ಹೇಳಿದರು.

ಸಮಾಜಸೇವಕ ಡಾ.ಜೀವಂದರ್ ಜೈನ್, ಮುಳುಬಾಗಿಲು ಗ್ರಾಮ ಪಂಚಾಯಿತಿ ಸದಸ್ಯ ಕೊರಕೋಟೆ ಶ್ರೀನಿವಾಸ್, ಮಾಗರವಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಈಚಲಬೈಲು ಶಶಿಧರ್, ಸಂತೋಷ್ ಹೆಗ್ಡೆ ಇದ್ದರು.

ಪ್ರತಿಕ್ರಿಯಿಸಿ (+)