ಸೋಮವಾರ, ಅಕ್ಟೋಬರ್ 21, 2019
24 °C

ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ, ಜಾಗೃತಿ ಓಟ

Published:
Updated:
Prajavani

ಮಂಡ್ಯ: ಬಿ.ಹೊಸೂರು ಕಾಲೊನಿ, ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ನಗರದ ರೈಲು ನಿಲ್ದಾಣ, ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾಗೂ ವಿವಿಧೆಡೆ ಸ್ವಚ್ಛತಾ ಅಭಿಯಾನ ನಡೆಸಿದರು.

ಭಾರತೀಯ ಕ್ರೀಡಾ ಪ್ರಾಧಿಕಾರ ಆಯೋಜಿಸಿರುವ ಫಿಟ್‌ ಇಂಡಿಯಾ ಅಭಿಯಾನದಡಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಶ್ರಮದಾನ ಮಾಡಿದರು. ಮಿಮ್ಸ್‌ ಆಸ್ಪತ್ರೆ ಆವರಣ, ಸರ್ಕಾರಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಸ್ವಚ್ಛತೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬಿದ್ದಿದ್ದ ಕಸವನ್ನು ಚೀಲದಲ್ಲಿ ತುಂಬಿ ತೆರವುಗೊಳಿಸಿದರು. ಪ್ರಾಚಾರ್ಯರಾದ ಎಚ್‌.ಆರ್‌.ಶ್ಯಾಮಲಾ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಪ್ಲಾಗಿಂಗ್‌ ರನ್‌ ಹೆಸರಿನಲ್ಲಿ ಮ್ಯಾರಥಾನ್‌ ನಡೆಸಿದ ವಿದ್ಯಾರ್ಥಿಗಳು ರೈಲು ನಿಲ್ದಾಣದಿಂದ ಸ್ವರ್ಣಸಂದ್ರ ಬಡಾವಣೆವರೆಗೂ ಮೆರವಣಿಗೆ ನಡೆಸಿ ಸ್ವಚ್ಛತಾ ಜಾಗೃತಿ ಮೂಡಿಸಿದರು. ಪ್ಲಾಸ್ಟಿಕ್‌ ಬಾಟಲಿಗಳನ್ನು ಆಯ್ದು ನಗರಸಭೆಯ ಕಸದ ವಾಹನಗಳಿಗೆ ನೀಡಿದರು. ವಿದ್ಯಾರ್ಥಿಗಳಿಗೆ ಗುರುರಾಜ ಇಂಟರ್‌ನ್ಯಾಷನಲ್‌ ಹೋಟೆಲ್‌ ವತಿಯಿಂದ ಕೈಕವಚ ನೀಡಲಾಗಿತ್ತು. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆವರೆಗೂ 3 ಕಿ.ಮೀ ಜಾಥಾ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)