ಮಂಗಳವಾರ, ಅಕ್ಟೋಬರ್ 22, 2019
21 °C

ಫೋನ್‌ ಕದ್ದಾಲಿಕೆ ಪ್ರಕರಣ: ದೇವರ ಮೇಲೆ ಅನುಮಾನ ಪಡಲು ಸಾಧ್ಯವೇ?

Published:
Updated:
Prajavani

ಮಂಡ್ಯ: ‘ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಎಚ್‌.ಡಿ.ಕುಮಾರಸ್ವಾಮಿ ಅವರು ದೇವರು ಎಂದೇ ನಂಬಿದ್ದಾರೆ. ದೇವರ ಮೇಲೆ ಅನುಮಾನ ಪಡಲು ಸಾಧ್ಯವೇ? ಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ಶ್ರೀಗಳ ಹೆಸರನ್ನು ಅನವಶ್ಯಕವಾಗಿ ಎಳೆದು ತರಲಾಗಿದೆ’ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ನಿರ್ಮಲಾನಂದನಾಥ ಸ್ವಾಮೀಜಿಗಳ ಪೂಜೆಯೇ ಕಾರಣ. ಅಂಥವರ ಬಗ್ಗೆ ಅನುಮಾನ ಪಡುವ ಅಗತ್ಯವಿಲ್ಲ. ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ಪ್ರಕರಣದಲ್ಲಿ ಶ್ರೀಗಳ ಹೆಸರು ತಂದಿದ್ದಾರೆ. ಇದರಿಂದ ಸ್ವಾಮೀಜಿ ಮನಸ್ಸಿಗೆ ನೋವಾಗಿದೆ. ಈ ಬಗ್ಗೆ ಅವರು ಎಲ್ಲೂ ಮಾತನಾಡಿಲ್ಲ’ ಎಂದರು.

‘ಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ರಾಜಕೀಯ ಪಿತೂರಿ ಇರುವುದು ಎದ್ದು ಕಾಣುತ್ತಿದೆ. ಕೆಲವು ಸಂದರ್ಭಗಳಲ್ಲಿ ಪೊಲೀಸ್‌ ಇಲಾಖೆಯಿಂದ ಫೋನ್‌ ಕದ್ದಾಲಿಕೆ ಆಗುತ್ತದೆ. ಆದರೆ ಮೈತ್ರಿ ಸರ್ಕಾರದಿಂದಲೇ ಫೋನ್‌ ಕದ್ದಾಲಿಕೆ ಆಗಿದೆ ಎಂಬುದು ಸುಳ್ಳು’ ಎಂದರು.

ಇದನ್ನೂ ಓದಿ... ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದ ಶ್ರೀಗಳ ಫೋನ್‌ ಕದ್ದಾಲಿಸಿಲ್ಲ: ಎಚ್‌ಡಿಕೆ

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)