ಶುಕ್ರವಾರ, ನವೆಂಬರ್ 15, 2019
27 °C

ಕರಾವಳಿ: ನಾಳೆಯಿಂದ ಭಾರಿ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮಾರುತಗಳು ವೇಗವಾಗಿ ಬೀಸುತ್ತಿದ್ದು, ಅ. 15 ಮತ್ತು 16ರಂದು ಈ ಭಾಗದಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ 6 ಸೆಂ.ಮೀ. ಮಳೆಯಾಗಿದೆ. ಭಟ್ಕಳ, ತೀರ್ಥಹಳ್ಳಿ 4, ಸುಬ್ರಹ್ಮಣ್ಯ, ಕೊಲ್ಲೂರು, ಸಾಗರದಲ್ಲಿ ತಲಾ 3 ಸೆಂ.ಮೀ. ಮಳೆಯಾಗಿದೆ.

ಪ್ರತಿಕ್ರಿಯಿಸಿ (+)